ವಿಜಯ ದರ್ಪಣ ನ್ಯೂಸ್……
ದೊಡ್ಡಕುರುಬರಹಳ್ಳಿ ಗ್ರಾಮದ ಜನತೆಗೆ ಹೃದಯಪೂರ್ವಕ ಧನ್ಯವಾದ ಹೇಳಿದ ನಿಖಿಲ್ ಕುಮಾರಸ್ವಾಮಿ

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಡ್ಡಕುರುಬರಹಳ್ಳಿ ಗ್ರಾಮದ ಶ್ರೀ ಬಿಸಿಲು ಮಾರಮ್ಮ ದೇವಿಯ ದರ್ಶನಕ್ಕೆ ಸಂಬಂಧಿಸಿದಂತೆ ದೊಡ್ಡಕುರುಬರಹಳ್ಳಿ ಗ್ರಾಮದ ತಾಯಂದಿರು ಹಾಗೂ ಗ್ರಾಮದ ಗುರುಹಿರಿಯರು ನಮ್ಮ ನಿವಾಸಕ್ಕೆ ಆಗಮಿಸಿ, ಶ್ರೀ ಬಿಸಿಲು ಮಾರಮ್ಮ ದೇವಿಯ ದರ್ಶನ ಪಡೆಯಲು ಆಗಮಿಸುವಂತೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಇಂದು ದೊಡ್ಡಕುರುಬರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ರಾಜ್ಯ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶ್ರೀ ಬಿಸಿಲು ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಕಲ್ಯಾಣಕ್ಕಾಗಿ ಮನದುಂಬಿ ಪ್ರಾರ್ಥಿಸಿದರು.

ದೇವಿಯ ದರ್ಶನ ಪಡೆಯಲು ಗ್ರಾಮಕ್ಕೆ ಆಗಮಸಿದ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ನನಗೆ ಆರತಿ ಬೆಳಗಿ, ಬಗೆಬಗೆಯ ಹೂಗಳ ಹಾರ, ಹಣ್ಣಿನ ಹಾರ ಹಾಕಿ ಅದ್ದೂರಿಯಾಗಿ ಸ್ವಾಗತ ಕೋರಿದ ತಾಯಂದಿರು, ಗುರುಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳ ಪ್ರೀತಿ, ಮಮಕಾರ ಹಾಗೂ ವಾತ್ಸಲ್ಯಕ್ಕೆ ನಾನು ಸದಾಕಾಲವೂ ಚಿರಋಣಿ.

ಕ್ಷುಲ್ಲಕ ಮನಸ್ಥಿತಿ ಬಿಟ್ಟು ನಮ್ಮ ಸಂಸ್ಕೃತಿ, ಸಂಸ್ಕಾರಕ್ಕೆ ಬೆಲೆ ನೀಡುವ ಮೂಲಕ ನಾವೆಲ್ಲರೂ ಕರ್ನಾಟಕದ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸೋಣ ಎಂದು ತಿಳಿಸಿದೆ.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎ.ಪಿ. ರಂಗನಾಥ ಅವರು, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಮುತ್ತು ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಗ್ರಾಮದ ಗುರುಹಿರಿಯರು, ಯುವಕರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.











