--Ads--

ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ

On: May 4, 2024 9:32 AM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್…
ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ 
ಯಲಹಂಕ : ನಾಟಕದಲ್ಲಿ ಅಭಿನಯಿಸುವಾಗಲೇ  ನಟರೊಬ್ಬರು ವೇದಿಯ ಮೇಲೆ ಕುಸಿದು ಪ್ರಾಣ ಬಿಟ್ಟ ಘಟನೆ ನಡೆದಿದೆ. 
  ಮೃತಪಟ್ಟವರು  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ಅರದೇಶಹಳ್ಳಿ ಗ್ರಾಮದ ನಿವಾಸಿಯಾದ ಎನ್. ಮುನಿಕೆಂಪಣ್ಣ ಎಂದು ತಿಳಿದುಬಂದಿದೆ. 
  ಶುಕ್ರವಾರ ರಾತ್ರಿ ಯಲಹಂಕ ತಾಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು, ಈ ವೇಳೆ ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿಕೆಂಪಣ್ಣ ರಾತ್ರಿ ಸುಮಾರು 1.30 ರ ಸಮಯದಲ್ಲಿ ಪಾತ್ರದಲ್ಲಿ ತಲ್ಲೀನರಾಗಿದ್ದಾಗಲೇ ಕುಸಿದು ಬಿದ್ದು ತಮ್ಮ ಪ್ರಾಣ ಬಿಟ್ಟಿದ್ದಾರೆ. 
 
ಮೃತ ಮುನಿಕೆಂಪಣ್ಣ ಅವರು ನಿವೃತ್ತ ಉಪನ್ಯಾಸಕರು, ಸಾಹಿತಿಗಳು, ಕಲಾವಿದರಾಗಿ ಸೇವೆಸಲ್ಲಿಸಿದ್ದ ಅವರು ಇತ್ತೀಚೆಗೆ  ದೇವನಹಳ್ಳಿಯಲ್ಲಿ  ನಡೆದ 28ನೇ ತಾಲ್ಲೂಕು ಕನ್ನಡ  ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು, 
 ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಮದ್ಯಾಹ್ನ ಮೂರು ಗಂಟೆಗೆ ಮುನಿಕೆಂಪಣ್ಣ ಅವರ ಹುಟ್ಟೂರು ಅರದೇಶಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ