--Ads--

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                 

On: July 15, 2024 4:10 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ         

                                                                                    ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ‌ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್​​ನ ನ್ಯಾ. ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.ಪ್ರಕರಣ ರದ್ದುಗೊಳಿಸುವ ಸಂಬಂಧ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 2023 ರ ಅಕ್ಟೋಬರ್ 19 ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಲು ನಿರ್ದೇಶನ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ಪೀಠ, ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿದ್ದು ಮಾತ್ರವಲ್ಲದೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.

WhatsApp

Join Now

Telegram

Join Now

Instagram

Join Now