--Ads--

ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ

On: August 30, 2024 3:22 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ

ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 29: ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಟ್ಟಕೋಟೆ ಗ್ರಾಮ ಪಂಚಾಯತಿ, ಕೆಂಪೇಗೌಡ ಇಂಟರ್ ನ್ಯಾಶನಲ್ ಏರ್ಪೋರ್ಟ್, ಲಯನ್ಸ್ ಕ್ಲಬ್ ಮತ್ತು ಶ್ರೀ ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೋಟೆ ಗ್ರಾಮದ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಪುರುಷ ಮತ್ತು ಮಹಿಳೆಯರ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿತ್ತು.

‌ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಹಾಗೂ
ಅರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣಪ್ಪ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ, ಸ್ಥಳೀಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆಂಪರಾಜು, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಅಶ್ವಥ್ ನಾರಾಯಣ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು, ಶಾಲೆಯ ಮುಖ್ಯ ಶಿಕ್ಷಕರಾದ ಪ್ರಕಾಶ್ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎರಡು ದಿನ ಆಹಾರ ಪರವಾನಿಗೆ ವಿಶೇಷ ಆಂದೋಲನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 29,2024: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತಾಲಯದ ನಿರ್ದೆಶನದಂತೆ ಆಗಸ್ಟ್ 30 ಹಾಗೂ 31ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಆಹಾರ ಉದ್ದಿಮೆಗಳಿಗೆ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ವಚ್ಛತೆ ಹಾಗೂ ನೈರ್ಮಲ್ಯತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಆಹಾರ ಸುರಕ್ಷತೆ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಪರವಾನಗಿ ಪಡೆಯದ ಆಹಾರ ಉದ್ದಿಮೆಗಳಿಗೆ ಆಹಾರ ಪರವಾನಿಗೆ ನೀಡಲು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now