--Ads--

ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

On: March 28, 2025 11:31 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಅಗ್ನಿ ಬನ್ನಿರಾಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಅಗ್ನಿ ಬನ್ನಿರಾಯರು ತಿಗಳ ಸಮುದಾಯದಲ್ಲಿ ಬಹಳ ಶ್ರಮ ಜೀವಿಗಳು ಅವರ ಶ್ರಮಕ್ಕೆ ಗೌರವ ಸೂಚಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಮಾರ್ಚ್ 28 ರಂದು ತಿಗಳರ ದೇವರಾದ ಅಗ್ನಿ ಬನ್ನಿರಾಯ ಜಯಂತಿಯನ್ನು ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಆಪ್ತ ಸಹಾಯಕ ಅಭಿಷೇಕ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now