ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….
ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಮೇ03:-ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ-2025 ಕ್ಕೆ ಸಂಬಂಧಿಸಿದಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ರವರ ವಿಚಾರಣಾ ಆಯೋಗ ರಚಿಸಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಪ.ಜಾತಿ ಒಳಮೀಸಲಾತಿ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು ಮೇ.05 ರಿಂದ ಜಿಲ್ಲೆಯಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ರವರು ತಿಳಿಸಿದ್ದಾರೆ.
ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10 ಗಣತಿದಾರರಿಗೆ ಒರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೇ 5 ರಿಂದ 17 ರವರೆಗೆ ಗಣತಿದಾರರಿಗೆ ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತದೆ. ಮೇ 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಯಲಿದೆ. ಗಣತಿದಾರರು ಮನೆ ಮನೆ ಭೇಟಿ ನೀಡಿದ ಸಂಧರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ್ ಕಾರ್ಡ್, ಪರಿತರ ಚೀಟಿ, ಮೊಬೈಲ್ ನಂಬರ್, ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು.
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ರಾಜ್ಯ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ:9482300400 ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್, ರವರ ವಿಚಾರಣಾ ಆಯೋಗ ಸಹಾಯವಾಣಿ :9481359000 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.