--Ads--

ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ

On: May 8, 2025 6:49 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ07 :ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ’ ವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.

ಈ ಮೇಳದಲ್ಲಿ ಸುಮಾರು 50 ಕ್ಕೂ ಹೆಚ್ಚು ವಿವಿಧ ಮಾವು ತಳಿ, ಹಲಸು ತಳಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಹಮ್ಮಿಕೊಂಡು ರೈತರಿಂದ ನೇರವಾಗಿ ಖರೀದಿಸಲು ಅವಕಾಶ ಕಲ್ಪಿಸಲಾಗುವುದು.

ರೈತರು ತಾವು ಬೆಳೆದ ಮಾವು ಮತ್ತು ಹಲಸು ಬೆಳೆಗಳನ್ನು ಮಾರಾಟ ಮಾಡಲು ಮೇ 08 ರಿಂದ 14 ರ ವರೆಗೆ ಹತ್ತಿರದ ತಾಲೂಕು ತೋಟಗಾರಿಕೆ ಕಛೇರಿಯಲ್ಲಿ ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ 9448999214, ದೇವನಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9480461234, ದೊಡ್ಡಬಳ್ಳಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 94821296648, ಹೊಸಕೋಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9880210892 ಹಾಗೂ ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9880461607 ಗೆ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(((((((((((((((((((((()))))))))))))))))))))))))))

ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ.ಜಿಲ್ಲೆ, ಮೇ 07 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದ್ದು, ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ,ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now