ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಭೇಟಿ 

ವಿಜಯ ದರ್ಪಣ ನ್ಯೂಸ್….

ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ  ಅಧಿಕಾರಿ ಭೇಟಿ

ತಾಂಡವಪುರ ಮೇ 13 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಕೃಷ್ಣಂ ರಾಜು ರವರು ಭೇಟಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಷ್ಟು ಗ್ರಾಮಗಳಲ್ಲಿ ಒಳಚಂಡಿ ಕಾಮಗಾರಿ ಪೂರ್ಣಗೊಂಡಿದೆ ಇನ್ನು ಎಷ್ಟು ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಆಗಬೇಕು ಎಂಬ ಮಾಹಿತಿಯನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರಿಂದ ಪಡೆದುಕೊಂಡರು.

ಈಗಾಗಲೇ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ತಾಂಡವಪುರ ಬಂಚಳ್ಳಿ ಹುಂಡಿ ಚಿಕ್ಕಯ್ಯನ ಚಿತ್ರ ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಸಂಪೂರ್ಣವಾಗಿ ಪೂರ್ಣಗೊಂಡಿದ್ದು ಇನ್ನುಳಿದ ಅಡಕನಹಳ್ಳಿ ಹುಂಡಿ ಹೆಬ್ಯಾ ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಆಗಬೇಕಾಗಿದ್ದು ಈ ಬಗ್ಗೆ ಸರ್ಕಾರಕ್ಕೂ ಕೂಡ ಸಹ ವರದಿ ನೀಡಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಮೈಸೂರು ಜಿಲ್ಲಾ ಉಪಾ ಅಭಿವೃದ್ಧಿ ಅಧಿಕಾರಿ ಕೃಷ್ಣಂ ರಾಜು ರವರಿಗೆ ವಿವರಿಸಿದರು.

ಗ್ರಾಮಗಳ ಅಭಿವೃದ್ಧಿ ಮತ್ತು ಒಳಚರಂಡಿ ಅಭಿವೃದ್ಧಿ ಕುರಿತು ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಆದ ಸಿದ್ದರಾಮಯ್ಯನವರಿಗೆ ಗ್ರಾಮ ಪಂಚಾಯತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಲಾಗಿದ್ದು ಈ ಬಗ್ಗೆ  ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯನವರು ಸಹ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚು ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಅಲ್ಲದೆ ಕೃಷ್ಣಂ ರಾಜು ರವರು ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತಹ ಇನ್ನು ಹಲವಾರು ಮಾಹಿತಿಗಳನ್ನು ಪಡೆದುಕೊಂಡು ಈ ಎಲ್ಲ ವಿಚಾರಗಳನ್ನು ಸಂಬಂಧಪಟ್ಟ ಅಧಿಕಾರಿಗಳಲ್ಲಿ ವಿವರಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮಾರಯ್ಯ ಲೆಕ್ಕ ಸಹಾಯಕ ಎಸ್ ಪುಟ್ಟರಾಜು ಗ್ರಾಮ ಪಂಚಾಯತಿ ಸದಸ್ಯ ಎನ್ ಚಂದ್ರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು