--Ads--

ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ

On: May 15, 2025 3:41 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ತಾಂಡವಪುರ ಮೇ 15 : ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಕೆ ಪಿ ಸಿ ಸಿ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಅವರ ಆದೇಶದಂತೆ ದುಂದು ವೆಚ್ಚ ಮಾಡದೆ ಪರಿಸರದ ಸಂದೇಶದೊಂದಿಗೆ ಸರಳವಾಗಿ
ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ ಶ್ರೀನಾಥ್ ಬಾಬು ರವರು ಮಾತನಾಡಿ ಡಿಕೆ ಶಿವಕುಮಾರ ಎಂದರೆ ಕಾಂಗ್ರೆಸ್ ಕಾರ್ಯಕರ್ತರ ಒಂದು ಶಕ್ತಿ ಅವರ ಹೆಸರಿನಲ್ಲೇ ಇಂದು ರಾಜ್ಯದಲ್ಲೆಡೇ ವಿದ್ಯಾರ್ಥಿಗಳು ಮತ್ತು ಯುವಕರ ಪ್ರತಿಭಟನೆ ಚಳುವಳಿ ಸತ್ಯಾಗ್ರಹದಂತಹ ಉತ್ತಮ ಹೋರಾಟ ಮಾಡುವ ಮನೋಭಾವನೆ ಬಂದಿದ್ದು ಡಿ.ಕೆ ಶಿವಕುಮಾರ್ ಅವರು ಕೇವಲ ರಾಜಕೀಯವಾಗಿ ಅಲ್ಲದೆ ಸಾಮಾಜಿಕವಾಗಿ ಕೂಡ.. ಜನಸೇವೆ ಮಾಡುತ್ತಾ ಬಂದಿದ್ದಾರೆ ಎಂದರು.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕಿಟ್ಟು ಹೋರಾಡುತ್ತಿರುವ ಸಂದರ್ಭದಲ್ಲಿ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸುತಿದ್ದೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ಜಿ ರಾಘವೇಂದ್ರ ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ದಿನೇಶ್ ಪಾಂಡುಪುರ,ಪರಿಸರ ಬಳಗದ ಕೃಷ್ಣಪ್ಪ ಗಂಟೆಯ, ಎಪಿಎಂಸಿ ರಾಮಚಂದ್ರ, ಸೇವಾದಳ ಮೋಹನ್, ಹರೀಶ್ ನಾಯ್ಡು, ರಮೇಶ ರಾಮಪ್ಪ, ಹಿನಕಲ್ ಉದಯ್, ಡೈರಿ ವೆಂಕಟೇಶ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು

WhatsApp

Join Now

Telegram

Join Now

Instagram

Join Now