--Ads--

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬ ಆಚರಣೆ

On: May 18, 2025 7:13 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರ ಹುಟ್ಟು ಹಬ್ಬ ಆಚರಣೆ

“* ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾಜಿ ಪ್ರದಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ಜನುಮ ದಿನದ ಪ್ರಯುಕ್ತ   ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಭೇಟಿ ಮಾಡಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ಅವರ ಆಶಿರ್ವಾದ ಪಡೆದರು.*”

ಶಿಡ್ಲಘಟ್ಟ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರ 93ನೇ ಜನ್ಮದಿನವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.

ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಮಾಡಿದರು.

ನಗರದ ಆಶಾಕಿರಣ ಅಂಧ ಮಕ್ಕಳ ವಸತಿ ಶಾಲೆಯಲ್ಲಿ ಕೇಕ್ ಕತ್ತರಿಸಿ ಮಕ್ಕಳೊಂದಿಗೆ ಜನ್ಮದಿನವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಮಕ್ಕಳಿಗೆ ಹೊಸ ಬಟ್ಟೆಗಳನ್ನು ವಿತರಿಸಿ ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಎಚ್.ಡಿ.ದೇವೇಗೌಡ ಅವರ ಜನ್ಮದಿನವನ್ನು ಸಮಾಜಮುಖಿ ಕೆಲಸಗಳ ಮೂಲಕ ಆಚರಿಸಲಾಯಿತು.

ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ ಮಾತನಾಡಿ ಒಂದು ಸಾಮಾನ್ಯ ಹಳ್ಳಿಯಿಂದ ಪ್ರಾರಂಭಗೊಂಡ ಅವರ ರಾಜಕೀಯ ದೆಹಲಿಯಲ್ಲಿ ಪ್ರಧಾನಮಂತ್ರಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ ಹಂತಕ್ಕೆ ಬೆಳೆದ ದೇವೇಗೌಡ ಅವರ ಬದುಕು ಎಲ್ಲಾರಿಗೂ ಆದರ್ಶವಾಗಿದ್ದು ಅವರು ನಡೆಸಿದ ರೈತಪರ ಹೋರಾಟ ಮತ್ತು ಸ್ವಚ್ಛ ರಾಜಕೀಯ ಜೀವನ ನಮ್ಮೆಲ್ಲರಿಗೂ ದಾರಿ ದೀಪವಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಾರಾಯಣಸ್ವಾಮಿ, ಎಸ್‌. ರಾಘವೇಂದ್ರ, ಕೃಷ್ಣಮೂರ್ತಿ, ಮಂಜುನಾಥ್, ಬಾಲು ಹಾಗೂ ಜೆಡಿಎಸ್‌ ಮುಖಂಡರಾದ ಲಕ್ಷ್ಮೀನಾರಾಯಣ(ಲಚ್ಚಿ) ಎಸ್.ಎಂ. ರಮೇಶ್,ಶಂಕರ್, ಶ್ರೀನಾಥ್, ಶಶಿ, ಇಂತಿಯಾಜ್,ದಾದಾಫೀರ್, ತೋಸಿಫ್, ಆಸೀಪ್, ಖಾದೀ‌ರ್, ಎ. ರಾಮಚಂದ್ರಪ್ಪ, ಪ್ರಭು,ಮುರಳಿ, ಮುಬಾರಕ್, ಶ್ರೀನಿವಾಸ್ ಮತ್ತಿತರರು ಪಾಲ್ಗೊಂಡಿದ್ದರು.

 

WhatsApp

Join Now

Telegram

Join Now

Instagram

Join Now