--Ads--

ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ

On: May 29, 2025 4:36 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ

ತಾಂಡವಪುರ ಮೈಸೂರು ಮೇ 29 : ಕನ್ನಡ ತಮಿಳ್ ನಿಂದ ಹುಟ್ಟಿರುವ ಭಾಷೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಚಿತ್ರನಟ ಕಮಲಹಾಸನ್ ಅವರ ವಿರುದ್ಧ ಕರ್ನಾಟಕ ಹಿತರಕ್ಷಣ ವೇದಿಕೆ ವತಿಯಿಂದ ದೇವರಾಜ ಅರಸು ರಸ್ತೆಯಲ್ಲಿ ಅವರ ಭಾವಚಿತ್ರಕ್ಕೆ ಮಸಿ ಬಳಿದು ಕಮಲ ಹಾಸನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಬಳಿಕ ಮಾತನಾಡಿದ ಪ್ರತಿಭಟನಾಕಾರರು ಕಮಲಹಾಸನ್ ಅವರು ಈ ಕೂಡಲೇ ಕನ್ನಡ ಭಾಷೆಗೆ ಅವಮಾನ ಮಾಡಿದ್ದಕ್ಕಾಗಿ ಕ್ಷಮೆಯೋಚಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು.

ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ ಕಮಲಹಾಸನ ಅನೇಕ ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ಆದರೆ, ಅವರ ಹೇಳಿಕೆಯಿಂದ ಕನ್ನಡಿಗರಿಗೆ ಅವಮಾನಿಸದಂತಾಗಿದೆ. ಅಲ್ಲದೇ, ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದರು.

ಕಮಲಹಾಸನ ಅವರು ರಾಜ್ಯಕ್ಕೆ ಬಂದು ಕನ್ನಡ ತಮಿಳನಿಂದ ಬಂದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ರೊಚ್ಚಿಗೆಳುವಂತೆ ಮಾಡಿದ್ದಾರೆ. ನಾಡು ನುಡಿಗೆ ಹೆಸರಾದ ಕರ್ನಾಟಕ, ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ, ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ ಭಾಷೆಯಾಗಿದೆ.

ಕೋಟ್ಯಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್ ಅವರು ಅವಮಾನಿಸಿದ್ದಾರೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ. ಶೀಘ್ರವೇ ನಟ ಕಮಲಹಾಸನ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಬೇಕು. ಇಲ್ಲವಾದರೆ ಅವರ ಚಿತ್ರಗಳನ್ನು ಪ್ರದರ್ಶನಕ್ಕೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.

ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಮೂಡ ಮಾಜಿ ಸದಸ್ಯರಾದ ನವೀನ್ ಕುಮಾರ್, ಮಂಜುನಾಥ್, ರವಿಕುಮಾರ್, ಸಂಗಮ್, ಉಮೇಶ್, ರವಿಚಂದ್ರ, ಪ್ರಶಾಂತ್, ನಿತಿನ್, ಹರೀಶ್ ಗೌಡ, ರವಿ, ಶ್ರೀನಿವಾಸ್, ಕಣ್ಣಣ್ಣ, ಶ್ರೀನಿವಾಸ್ ಶೆಟ್ಟಿ, ಕುಮಾರ್, ಬಾಬು, ಚಂದ್ರು, ಆನಂದ,ಗುರುರಾಜ್ ಶೆಟ್ಟಿ, ಪ್ರಮೋದ್ ಗೌಡ, ಹಾಗೂ ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ