--Ads--

ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಪ್ರೋತ್ಸಾಹ:ಸಚಿವ ಮುನಿಯಪ್ಪ

On: May 30, 2025 1:34 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

 ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಪ್ರೋತ್ಸಾಹ:ಸಚಿವ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 30 : ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯ ಹೆಸರು ಮುಂಚೂಣಿಯಲ್ಲಿ ಇರಬೇಕು ಎಂದು ಮಾನ್ಯ ಆಹಾರ  ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ಬೆಂಗಳೂರು ಹಾಲು ಒಕ್ಕೂಟದ ದೇವನಹಳ್ಳಿ ಶಿಬಿರ ಕಛೇರಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು ಹಾಲು ಉತ್ಪಾದನೆಯಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಇದನ್ನು ಹಾಗೇ ಕಾಪಾಡಿಕೊಂಡು ಹೋಗಬೇಕು. ಹೈನುಗಾರಿಕೆ ಪ್ರೋತ್ಸಾಹಿಸಲು ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು. ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಜಿಲ್ಲೆಯಲ್ಲಿ ರೇಷ್ಮೆ ಬೆಳೆ ಬೆಳೆಯುತ್ತಿರುವವರ ಸಂಖ್ಯೆ ಕಡಿಮೆ ಇದೆ. ರೇಷ್ಮೆ ಬೆಳೆ ಬೆಳೆಯಲು ಸರ್ಕಾರ ಎಲ್ಲಾ ಸವಲತ್ತನ್ನು ರೈತರಿಗೆ ನೀಡುವುದರ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಜಿಲ್ಲೆಯ ಅಭಿವೃದ್ಧಿಗೂ ಗಮನಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ಬರುವ ಸಾಧ್ಯತೆ ಇದೆ ಹಾಗಾಗಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕ ಸ್ಥಾನಕ್ಕೆ ದೇವನಹಳ್ಳಿ ತಾಲ್ಲೂಕಿನಿಂದ ನೂತನವಾಗಿ ಆಯ್ಕೆಯಾದ ಎಸ್.ಪಿ.ಮುನಿರಾಜು ಅವರು ಮಾತನಾಡಿ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯವನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡುವ ಭರವಸೆ ನೀಡುತ್ತೇನೆ. ಹಾಲು ಉತ್ಪಾದಕರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆ, ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಲಿ ಉಪಧ್ಯಾಕ್ಷ ಕೆ ಎಂ ಎಂ ಮಂಜುನಾಥ್ , ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ನಿರ್ದೇಶಕ ಪ್ರಸನ್ನ ಕುಮಾರ್,  ದೇವನಹಳ್ಳಿ ಪುರಸಭೆ ಅಧ್ಯಕ್ಷ ಮುನಿಕೃಷ್ಣಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ