--Ads--

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ  ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ  ರವಿಕುಮಾ‌ರ್  ಘೋಷಣೆ

On: June 5, 2025 4:33 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ  ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ  ರವಿಕುಮಾ‌ರ್  ಘೋಷಣೆ

ಶಿಡ್ಲಘಟ್ಟ : ವಿಧಾನಸಭಾ ಕ್ಷೇತ್ರದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವೈಯಕ್ತಿಕ ವೇತನದಿಂದ 1 ಲಕ್ಷ ರೂ.ಗಳ ಪ್ರಥಮ ಬಹುಮಾನ, 50,000 ಸಾವಿರ ರೂ.ಗಳ ದ್ವಿತೀಯ ಬಹುಮಾನ ,25,000 ಸಾವಿರ ರೂ.ಗಳ. ತೃತೀಯ ಬಹುಮಾನ ನೀಡುವುದಾಗಿ ಶಾಸಕ ಮೇಲೂರು ರವಿಕುಮಾ‌ರ್ ಅವರು ಘೋಷಣೆ ಮಾಡಿ ಬಿಇಒ ಅವರಿಗೆ ತಿಳಿಸಿ ಎಲ್ಲಾ ಶಾಲೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.

ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ನೋಟ್‌ಬುಕ್, ಸಮವಸ್ತ್ರ, ಲೇಖನ ಸಾಮಗ್ರಿ ವಿತರಿಸಿ ಅವರು ಮಾತನಾಡಿದರು.

ಹೆಚ್ಚಿನ ಫಲಿತಾಂಶ ಬರಲು ಶಿಕ್ಷಕರು ರೂಪುರೇಷೆಗಳನ್ನು ಸಿದ್ಧ ಪಡಿಸಿಕೊಂಡು ಶ್ರಮಿಸಿಬೇಕು ಅವರಿಗೂ ಕೂಡ ಸೂಕ್ತವಾದ ಬಹುಮಾನ ನೀಡಲಾಗುವುದು ಎಂದರು.
ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ತಾಲ್ಲೂಕು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಮತ್ತು ವಿದ್ಯಾರ್ಥಿಗಳ ಸಾಧನೆ ದೃಷ್ಟಿಯಿಂದ ಅವರನ್ನು ಪ್ರೋತ್ಸಾಹಿಸಲು ಬಹುಮಾನ ಘೋಷಿಸಲಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿನೇದಿನೆ ಕಡಿಮೆಯಾಗುತ್ತಿದ್ದು ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರು ಈ ಬಗ್ಗೆ ಗಮನ ಹರಿಸಬೇಕು ಗ್ರಾಮೀಣ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸವಾಗಬೇಕು ಎಂದರು.

ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಅವರ ಸಿ.ಎಸ್.ಆರ್ ನಿಧಿಯಿಂದ 10 ಕೋಟಿ ರೂ.ಗಳ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದ್ದು, ಎಲ್ಲಾ ಸರ್ಕಾರಿ ಶಾಲೆಗಳನ್ನು ಮೂಲಸೌಕರ್ಯಗಳ ಅಭಿವೃದ್ಧಿಗೆ ತಯಾರಿ ನಡೆದಿದೆ ಎಂದರು.

ಈ ವೇಳೆ ಎಚ್.ಡಿ.ಡಿ ಹಾಗು ಜೆ.ಪಿ.ಎನ್‌ ಸೇವಾ ಟ್ರಸ್ಟ್ ವತಿಯಿಂದ ತಾಲೂಕಿನಾದ್ಯಂತ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು  ವಿತರಿಸಲಾಯಿತು.

ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಶಾಸಕರು ಸನ್ಮಾನಿಸಿ 5 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಿದರು.

ಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಸದಸ್ಯ ಮಂಜುನಾಥ್ ,ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್,ಜೆಡಿಎಸ್ ಯುವ ಮುಖಂಡ ತಾದೂರು ರಘು, ರಾಜೇಂದ್ರ ,ಗುತ್ತಿಗೆದಾರ ಬಿ.ಕೆ.ಶ್ರೀನಿವಾಸ್ ,ಗ್ರಾಮ ಪಂಚಾಯಿತಿ ಸದಸ್ಯ ಬಾಬು,
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಬೂಬ್, ಶಿಕ್ಷಕ ಪ್ರಕಾಶ್ ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now