ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್….

ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ

ಬೆಂ.ಗ್ರಾ.ಜಿಲ್ಲೆ, ಜೂ.26 :-ಜೂನ್ 27 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡ ವಂಶಸ್ಥರ ಮೂಲ ಸ್ಥಳವಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಜೂ.27 ರ ಬೆಳಗ್ಗೆ 8.30 ಕ್ಕೆ ಜ್ಯೋತಿ ರಥ ಯಾತ್ರೆ ಹೊರಡಲಿದೆ.

ಜ್ಯೋತಿ ರಥಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಲಿದ್ದಾರೆ. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಜೂನ್ 30 ರ ಸೋಮವಾರ ಜಿಲ್ಲಾ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಆವತಿಯಲ್ಲಿ ನಡೆಯಲಿರುವ ನಾಡಪ್ರಭು ಕೆಂಪೇಗೌಡರ ಜ್ಯೋತಿ ರಥಯಾತ್ರೆ ಕಾರ್ಯಕ್ರಮಕ್ಕೆ ಎಲ್ಲಾ ಸಮುದಾಯ ಮುಖಂಡರು, ಕನ್ನಡ ಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.