ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನ

ವಿಜಯ ದರ್ಪಣ ನ್ಯೂಸ್…..

ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ 30 : ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ “ವ್ಯಸನ ಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ಆಗಸ್ಟ್ 01(ಶುಕ್ರವಾರ) ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ದೇವನಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ.ಬಾಬಾ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಎಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬೈಲಾಂಜನಪ್ಪ ಸೇರಿದಂತೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಯಶೋಧ ಎಂ.ವಿ, ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ಬಿರಾದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಿಬ್ಬಂದಿ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ವಿಚಾರ ಸಂಕಿರಣ ಇರಲಿದೆ.

ನೆಲಮಂಗಲ:ಹವಾಮಾನ ಆಧಾರಿತ ಬೆಳೆ ವಿಮೆಗೆ ರೈತರು ನೋಂದಾಯಿಸಿ

ನೆಲಮಂಗಲ, ಜುಲೈ 30 :ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ವಿಮೆಗೆ ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.

ನೆಲಮಂಗಲ ತಾಲ್ಲೂಕಿನಲ್ಲಿ ಬೆಳೆದಿರುವ ಮಾವುಗೆ ವಿಮೆ ಮಾಡಿಸಬಹುದಾಗಿದ್ದು, ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80,000 ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5 ರಂತೆ 4,000 ರೂಗಳು ಮಾತ್ರ ವಿಮೆ ಪಾವತಿ ಮಾಡಬೇಕು.

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ವಿಮಾ ಕಂತು ನೋಂದಾಯಿಸಿಕೊಳ್ಳಲು ಆಗಸ್ಟ್ 11 ಕೊನೆಯ ದಿನವಾಗಿದೆ.

ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಹೆಚ್ಚಿನ ಮಾಹಿತಿಗೆ ನೆಲಮಂಗಲ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯನ್ನು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ 7337866626, ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ 8884829971, ಸಹಾಯಕ ತೋಟಗಾರಿಕೆ ಅಧಿಕಾರಿ,ತ್ಯಾಮಗೊಂಡ್ಲು ಹೋಬಳಿ 8197655732, ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ನೆಲಮಂಗಲ 9902581832, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ನೆಲಮಂಗಲ, 9880461607 ಸಂಪರ್ಕಿಸಬಹುದು ಎಂದು ನೆಲಮಂಗಲ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.