ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ …

ವಿಜಯ ದರ್ಪಣ ನ್ಯೂಸ್…..

ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ …

ಜ್ಯೂನಿಯರ್ – ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಂದ ಆತ್ಮೀಯ ಸ್ವಾಗತ

ಬೆಂಗಳೂರು, ಆಗಸ್ಟ್ 07, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಬೆಂಗಳೂರು ಭೇಟಿಗಾಗಿ ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು
ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಫಿಲಿಪೈನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾನೂನು ಪದವೀಧರ ತರಬೇತಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಆಗಸ್ಟ್ 07.: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2025-26ನೇ ಸಾಲಿನಲ್ಲಿ ಕಾನೂನು ಪದವೀಧರರಿಗೆ ತರಬೇತಿ ಪಡೆಯಲು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅಲ್ಪಸಂಖ್ಯಾತ ಸಮುದಾಯಕ್ಕೆ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಢಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಛೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 28 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಢಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದು ಎಂದು ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.