ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ಅವರಿಗೆ ಆತ್ಮೀಯ ಬೀಳ್ಕೊಡುಗೆ
ವಿಜಯ ದರ್ಪಣ ನ್ಯೂಸ್…
ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ಅವರಿಗೆ ಆತ್ಮೀಯ ಬೀಳ್ಕೊಡುಗೆ
ಬೆಂಗಳೂರು, ಆಗಸ್ಟ್ 08, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ದಿನಾಂಕ 07-08-2025 ರಂದು ಬೆಂಗಳೂರು ಭೇಟಿಗಾಗಿ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾದರು.
ಗೌರವಾನ್ವಿತ ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಫಿಲಿಪೈನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ.ಜಾತಿಯ ವಿವಿಧ ನಿಗಮಗಳಡಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,08: ಜಿಲ್ಲೆಯಲ್ಲಿ 2025-26 ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ದಿಗಾಗಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಯೋಜನೆ (ಕಿರು ಆರ್ಥಿಕ ಚಟುವಟಿಕೆಗಳಿಗೆ)ಮತ್ತು ನೇರ ಸಾಲ ಯೋಜನೆ (ಸಹಾಯಧನ ಗರಿಷ್ಠ ರೂ,2 ಲಕ್ಷ). ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಹೈನುಗಾರಿಕೆ (ಸಹಾಯಧನ ಗರಿಷ್ಠ ರೂ, 1.25 ಲಕ್ಷ), ಫಾಸ್ಟ್ ಫುಡ್ ಟ್ರಕ್, ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ (ಸಹಾಯಧನ ಗರಿಷ್ಠ ರೂ, 4 ಲಕ್ಷ), ಸ್ವಾವಲಂಭಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ ಹಳದಿ ಬೋರ್ಡ್, ಸಹಾಯಧನ ಗರಿಷ್ಠ ರೂ,4 ಲಕ್ಷ). ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ. ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕಾರ್ಮಿಕರಿಗೆ ಭೂಮಿಯನ್ನು ಖರೀದಿಸಲು ಸಹಾಯಧನ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸುವ ಸೌಲಭ್ಯ.
ಅರ್ಹ ಫಲಾನುಭವಿಗಳು ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯದವರು ಅರ್ಜಿಗಳನ್ನು ನೇರವಾಗಿ ಅನ್ ಲೈನ್ ಮೂಲಕ ಅಧಿಕೃತ ಜಾಲತಾಣವಾದ https://sevasindhu.karnataka.gov.in ನಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ವಿಶೇಷ ಸೂಚನೆ:
2023-24 ಮತ್ತು 2024-25ನೇ ಸಾಲಿನಲ್ಲಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ – 8050854019, ದೊಡ್ಡಬಳ್ಳಾಪುರ – 8050854020, ಹೊಸಕೋಟೆ – 8050854021, ನೆಲಮಂಗಲ – 8050854022 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.