ಭೈರವೈಕ್ಯರಾದ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…
ಭೈರವೈಕ್ಯರಾದ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ
ಬೆಂಗಳೂರಿನ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ತಡರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ.
ಕೆಂಗೇರಿಯಲ್ಲಿ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ, ಧಾರ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಶ್ರೀ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ (ಇಂದು 16-08-2025ನೇ ಶನಿವಾರ) ಶ್ರೀಮಠದ ಆವರಣದಲ್ಲೇ ಭಕ್ತರು ಮತ್ತು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಮಧ್ಯಾಹ್ನ 3 ಗಂಟೆಗೆ ನಾನಾ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೇರವೇರಿಸಲಿದ್ದಾರೆ.