ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್…

ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ. ಜಿಲ್ಲೆ, ಆಗಸ್ಟ್ 18: ಶೋಷಿತರ ಅಭಿವೃದ್ಧಿಯ ಹರಿಕಾರ ಎಂದೇ ಕರೆಯುವ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ಟೌನ್ ನ ಡಿ.ದೇವರಾಜ ಅರಸು ಭವನದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾಗಿದ್ದು ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೆರಿಸಲ್ಲಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್ ತಂಗಡಗಿ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಮತ್ತು ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರ ಘನ ಉಪಸ್ಥಿತಿ ಇರಲಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರು ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಸದಸ್ಯರಾದ  ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು, ರಾಮೋಜಿ ಗೌಡ, ದೊಡ್ಡಬಳ್ಳಾಪುರದ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್, ದೇವನಹಳ್ಳಿ ಟೌನ್ ಪುರಸಭೆ ಅಧ್ಯಕ್ಷ ಮುನಿಕೃಷ್ಣ ಹಾಗೂ ಉಪಧ್ಯಕ್ಷ ರವೀಂದ್ರ, ಸರ್ಕಾರದ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಆದ ತುಳಸಿ ಮದ್ದಿನೇನಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ಕೆ.ಎ.ದಯಾನಂದ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ರವರ ಬಗ್ಗೆ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿನೋದಾ ಬಿ.ಮುಗಳಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ನಾಮನಿರ್ದೇಶಿತ ಸದಸ್ಯರು, ಎಲ್ಲಾ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭೆ ಮತ್ತು ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆಗಸ್ಟ್ 20 ರಿಂದ 22 ರವರೆಗೆ ರಾಜ್ಯ ಮಟ್ಟದ ಪುಸ್ತಕ ಪ್ರದರ್ಶನ

ಬಿಜಿಎಸ್ ನಗರ ದೇವನಹಳ್ಳಿ  ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,18: 2022ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪ್ರದರ್ಶನವನ್ನು ಆಗಸ್ಟ್ 20 ರಿಂದ 22 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ಡಾ.ವಿಷ್ಣುವರ್ಧನ್ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಎಂ.ಸಿ ಬಡಾವಣೆ (ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹತ್ತಿರ), ವಿಜಯನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪುಸ್ತಕ ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು, ಮುಖ್ಯ ಗ್ರಂಥಾಲಯಗಳ ಕಚೇರಿಯಲ್ಲಿ ಪುಸ್ತಕ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಗೇ ಪುಸ್ತಕಗಳನ್ನು ಇಲಾಖೆಯ ಅಧಿಕೃತ ಜಾಲತಾಣ dpl.karnataka.gov.in ದಲ್ಲಿ ಪ್ರಕಟಿಸಲಾಗುತ್ತಿದೆ.

*ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ* ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೇಖಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 30 ರ ಸಂಜೆ 5:30 ರೊಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ತಡವಾಗಿ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೃದ್ದಾಶ್ರಮ ನಡೆಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಆರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಆ.18 : 2025-26ನೇ ಸಾಲಿನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿರಿಯ ನಾಗರೀಕರ ಆರೈಕೆ ಮತ್ತು ನೆರವಿಗಾಗಿ ವೃದ್ದಾಶ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಸ್ವಯಂ ಸೇವಾ ಸಂಸ್ಥೆ(ಎನ್ಜಿಓ) ಗಳ ಸಹಭಾಗಿತ್ವದಲ್ಲಿ ನಡೆಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಆರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಆಗಸ್ಟ್ 30 ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ಸಹಾಯಕ ನಿರ್ದೇಶಕರ ಕಚೇರಿ, ದೇವನಹಳ್ಳಿ ತಾಲ್ಲೂಕು ದೂ.ಸಂ 27681784. ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ 27623681. ಹೊಸಕೋಟೆ ತಾಲ್ಲೂಕು ದೂ.ಸಂ 27931528. ನೆಲಮಂಗಲ ತಾಲ್ಲೂಕು ದೂ.ಸಂ 27723172. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.