ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ನಿಸರ್ಗ ನಾರಾಯಣಸ್ವಾಮಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ 8 ವರ್ಷದಿಂದ  ಪ್ರಾಮಾಣಿಕವಾಗಿ ಜನಸೇವೆ ಮಾಡುವ ಮೂಲಕ ಜನರ ಪ್ರೀತಿ, ವಿಶ್ವಾಸಗಳಿಸಿದರ ಪರಿಣಾಮ 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ  ನನ್ನನ್ನು ಶಾಸಕರನ್ನಾಗಿ  ಆಯ್ಕೆ ಮಾಡಿದ್ದೀರಿ. ಐದು ವರ್ಷಗಳ ಕಾಲ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ  ಅಭಿವೃದ್ದಿಗೆ ಶಾಸಕನಾಗಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿರುತ್ತೇನೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ  ನನಗೆ ಮತದಾರರು ಕೊಟ್ಟ ತೀರ್ಪಿಗೆ ತಲೆಬಾಗಿ ಗೌರವಿಸುತ್ತೇನೆ. ನನಗೆ 68,427 ಮತ ನೀಡಿ ಬೆಂಬಲಿಸಿದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ, ಜೆಡಿಎಸ್ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ.

ಇನ್ನೂ ಮುಂದೆಯೂ ಸಹ ನಾವೆಲ್ಲರೂ ಸೇರಿ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷವನ್ನು ಮುಂಬರುವ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳಲ್ಲಿ ಗೆಲ್ಲಿಸಿ ಪಕ್ಷವನ್ನು ಗಟ್ಟಿಗೊಳಿಸೋಣ. ದೇವನಹಳ್ಳಿ ವಿಧಾನಸಭಾ ಕ್ಷೇತ್ರ ನನ್ನ ಕರ್ಮಭೂಮಿಯಾಗಿದ್ದು  ಕ್ಷೇತ್ರದ ಜನರೊಟ್ಟಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಜನಸೇವೆಯನ್ನು ಮುಂದುವರೆಸುತ್ತೇನೆ.

ನಿಸರ್ಗ ಎಲ್.ಎನ್ ನಾರಾಯಣಸ್ವಾಮಿ.
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರ.