--Ads--

ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ

On: August 22, 2025 11:10 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……..

ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಆಗಸ್ಟ್,21:ಉತ್ತರಾಖಂಡ್ ರಾಜ್ಯ ದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ ಅವರು ಜಿಲ್ಲಾ ಪಂಚಾಯತ್ ಅಡಿಯಲ್ಲಿ ಬರುವ ಪಂಚಾಯಿತಿಯ ಜಿಲ್ಲಾ, ತಾಲ್ಲೂಕು, ಗ್ರಾಮ ಹಂತಗಳು, ಕೂಸಿನ ಮನೆ, ನರೇಗಾ, ಇ-ಸ್ವತ್ತು, ಗ್ರಾಮಗಳ ಸ್ವಚ್ಛತಾ ಕಾರ್ಯ ಮತ್ತು ತ್ಯಾಜ್ಯ ವಿಲೇವಾರಿ ಘಟಕ (ಸ್ವಚ್ಛ ಭಾರತ್ ಮಿಷನ್), ಅರಿವು ಕೇಂದ್ರಗಳು(ಗ್ರಂಥಾಲಯ), ಅಮೃತ ಸರೋವರ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಗಳ ಬಗ್ಗೆ ವಿವರವಾಗಿ ಮಾಹಿತಿಯನ್ನು ಪಿಪಿಟಿ ಮೂಲಕ ಪ್ರಸ್ತುತ ಪಡಿಸಿದರು.

ನಂತರ ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿಯ ಸೇವೆಗಳು ಕುರಿತು ಮಾಹಿತಿ ಪಡೆದು, ಘನತ್ಯಾಜ್ಯ ವಿಲೇವಾರಿ ಘಟಕ, ಅರಿವು ಕೇಂದ್ರ, ಕೂಸಿನ ಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೊಡ್ಡಬಳ್ಳಾಪುರ ನಗರಸಭೆಗೆ ಭೇಟಿ ನೀಡಿ ಆಡಳಿತ ವೈಖರಿ, ಕಾರ್ಯವಿಧಾನ, ಆದಾಯ ವಿಧಾನ, ತೆರಿಗೆ, ಕ್ರಿಯಾ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಮಲ್ಲೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

##################################

ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,21: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಯೋಜನೆ (ಕಿರು ಆರ್ಥಿಕ ಚಟುವಟಿಕೆಗಳಿಗೆ)ಮತ್ತು ನೇರ ಸಾಲ ಯೋಜನೆ (ಸಹಾಯಧನ ಗರಿಷ್ಠ ರೂ,2 ಲಕ್ಷ). ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಹೈನುಗಾರಿಕೆ (ಸಹಾಯಧನ ಗರಿಷ್ಠ ರೂ, 1.25 ಲಕ್ಷ), ಫಾಸ್ಟ್ ಫುಡ್ ಟ್ರಕ್, ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ (ಸಹಾಯಧನ ಗರಿಷ್ಠ ರೂ, 4 ಲಕ್ಷ), ಸ್ವಾವಲಂಭಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ ಹಳದಿ ಬೋರ್ಡ್, ಸಹಾಯಧನ ಗರಿಷ್ಠ ರೂ,4 ಲಕ್ಷ). ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ. ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕಾರ್ಮಿಕರಿಗೆ ಭೂಮಿಯನ್ನು ಖರೀದಿಸಲು ಸಹಾಯಧನ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸುವ ಸೌಲಭ್ಯ.

ಅರ್ಹ ಫಲಾನುಭವಿಗಳು ಆದಿ ಜಾಂಬವ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯದವರು ಅರ್ಜಿಗಳನ್ನು ನೇರವಾಗಿ ಅನ್ ಲೈನ್ ಮೂಲಕ ಅಧಿಕೃತ ಜಾಲತಾಣವಾದ https://sevasindhu.karnataka.gov.in ನಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

2023-24 ಮತ್ತು 2024-25ನೇ ಸಾಲಿನಲ್ಲಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ – 8050854019, ದೊಡ್ಡಬಳ್ಳಾಪುರ – 8050854020, ಹೊಸಕೋಟೆ – 8050854021, ನೆಲಮಂಗಲ – 8050854022 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

WhatsApp

Join Now

Telegram

Join Now

Instagram

Join Now