ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸಚಿವ ಕೆಹೆಚ್ . ಮುನಿಯಪ್ಪ
ವಿಜಯ ದರ್ಪಣ ನ್ಯೂಸ್….
ದೇವನಹಳ್ಳಿ ಸರ್ಕಾರಿ ಶಾಲಾ ಕಟ್ಟಡದ ಕಿಟಕಿ ಸಜ್ಜಾ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸಚಿವ ಕೆಹೆಚ್ . ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.26: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ದರ್ಶನ್ ಎಸ್ ಎಂ. ಎಂಬ ವಿದ್ಯಾರ್ಥಿ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ನೀಡಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು,ಸಚಿವರ ಆಪ್ತ ಕಾರ್ಯದರ್ಶಿ ಡಾ.ನಟರಾಜ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ ಪಿ.ವೈಧ್ಯಾದಿಕಾರಿ ದೀಪಕ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆಗಸ್ಟ್,26: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ತರಬೇತಿ ಹಂತದಲ್ಲಿ ಒದಗಿಸುವ ಸೌಲಭ್ಯಗಳು :
ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸ ಕಾತರಿಯಾಗಿರುವುದು.
ಮಹೆಯಾನ ಅಭ್ಯರ್ಥಿಗಳಿಗೆ ತರಬೇತಿ ಪಡೆಯುವ ವೇಳೆ ರೂ.2000/- ಗಳು ತರಬೇತಿ ಭತ್ಯೆ ನೀಡಲಾಗುವುದು.
ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟ ಹಾಗೂ ಸಮವಸ್ತ್ರ ನೀಡಲಾಗುವುದು.
ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸದ ನೈಜ ಅನುಭವ ಸಹ ನೀಡಲಾಗುವುದು.
IHM,ಬೆಂಗಳೂರು ಹಾಗೂ FCI ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಪ್ರಮಾಣ ಪತ್ರ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.
Food and Beverage Service Steward ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು, ಹತ್ತನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.
ಕೊಠಡಿ ಪರಿಚಾರಕ (Room Attendant) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು, ಐದನೇ ತರಗತಿ ಉತ್ತೀರ್ಣರಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.
ಮುಂಭಾಗದ ಕಛೇರಿಯ ಸಹಾಯಕ (Front Office Associate) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು, ದ್ವಿತೀಯ ಪಿಯುಸಿ ಪಾಸಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.
ಬಹು ಪಾಕಪದ್ಧತಿ ಅಡುಗೆ (Multi Cuisine Cook) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ತಿಂಗಳ ತರಬೇತಿಯಿದ್ದು, 8ನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 10 ರಂದು ಸಂಜೆ 5:30 ರೊಳಗೆ ಕಚೇರಿಯ ಸಮಯದಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ:09 ನೆಲ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-22040633 ಇವರನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.