ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ

ಬೆಂಗಳೂರು ಜಹೀರ್ಗ್ರಾ.ಜಿಲ್ಲೆ ಆ.30 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮಪಂಚಾಯಿತಿಯ ನೂತನ ಗ್ರಾಮ ಸೌಧ ಕಟ್ಟಡವನ್ನು ಇಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹಚ್ ಮುನಿಯಪ್ಪ ಅವರು ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿಯು ಇಡೀ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ ಎನಿಸಿಕೊಂಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಹೆಚ್ಚು ತೆರಿಗೆ ಸಂಗ್ರಹ ಈ ಪಂಚಾಯಿತಿಗೆ ಬರುತ್ತಿದೆ. ಹಿಂದಿನ ಅಧ್ಯಕ್ಷರು, ಹಾಲಿ ಅಧ್ಯಕ್ಷರು, ಸದಸ್ಯರುಗಳು ತೆರಿಗೆಯ ಹಣ ಸದುಪಯೋಗ ಪಡೆದುಕೊಂಡು ಒಳ್ಳೆಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದೀರಿ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಕೊಟ್ಟು ಶಾಲೆ ಅಭಿವೃದ್ಧಿ ಪಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಿ ಎಂದರು.

ಗ್ಯಾರಂಟಿ ಯೋಜನೆ ಜಾರಿಗೆ ತಂದ ನಂತರ ತಲಾದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ತೆರಿಗೆ ಪಾವತಿ ಮಾಡುವುದರಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿ ಇದ್ದರೆ ಕರ್ನಾಟಕ ಎರಡನೇ ರಾಜ್ಯ. ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಪೋಡಿ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನಕ್ಕೆ ರಸ್ತೆ ಸಂಪರ್ಕ, ಬಡವರಿಗೆ ಸೈಟ್, ಮನೆ ನೀಡುವುದು ಮೊದಲ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ ಎಂದರು.

ಮೂರು ನಾಲ್ಕು ತಿಂಗಳಲ್ಲಿ 2500 ಸೈಟ್ ಎಲ್ಲಾ ವರ್ಗದ ಬಡವರಿಗೆ ನೀಡಲಾಗುವುದು. ಹಾಗೆ ಮನೆ ಇಲ್ಲದವರಿಗೆ ಮನೆ ನೀಡಲಾಗುತ್ತಿದೆ. ಪ್ರಣಾಳಿಕೆಯಂತೇ ರೈತರ ಪರ , ಬಡವರ ಪರ ಕೆಲಸ ಮಾಡಲಾಗುತ್ತಿದೆ ಎಂದರು.

ಬಳಿಕ 50 ಲಕ್ಷ ವೆಚ್ಚದಲ್ಲಿ ಮಹಿಳಾ ಕೌಶಲ್ಯಾಭಿವೃದ್ಧಿ ಭವನ, 1.5 ಕೋಟಿ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಇತರೆ ಸರ್ಕಾರಿ ಕಟ್ಟಡಗಳ ಸಂಕೀರ್ಣ. 21 ಲಕ್ಷ ವೆಚ್ಚದಲ್ಲಿ ಚಿಕ್ಕಸಣ್ಣೆ ಗ್ರಾಮದ ಅಂಗನವಾಡಿ ಕೇಂದ್ರ, 54.50 ಲಕ್ಷ ವೆಚ್ಚದಲ್ಲಿ ಬೈಚಾಪುರ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ, 25 ಲಕ್ಷ ವೆಚ್ಚದಲ್ಲಿ ಸ್ವಚ್ಛ ಸಂಕೀರ್ಣ ಘನ ಮತ್ತು ದ್ರವತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದ ನೂತನ ಕಟ್ಟಡಗಳ ಉದ್ಘಾಟನೆಯನ್ನು ಸಚಿವರು ನೆರವೇರಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ  ಮಹಿಳೆಯರ ಸಬಲೀಕರಣಕ್ಕೆ ಗ್ಯಾರಂಟಿ ಸಹಕಾರಿ ಆಗಿದೆ  ಎಂದರು.

ನಿವೇಶನ ಹಂಚಿಕೆ, ಸ್ಮಶಾನಕ್ಕೆ ಜಾಗ,ಪಶು ಆಸ್ಪತ್ರೆ ನಿರ್ಮಿಸಲು ಗ್ರಾಮಸ್ಥರು ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಣ್ಣೇಶ್ವರ ಗ್ರಾಮಪಂಚಾಯಿತಿ ಅಧ್ಯಕ್ಷೆ ಉಮಾ ಜಿ ಮುನಿರಾಜು, ಉಪಾಧ್ಯಕ್ಷ ಮುನಿರಾಜಪ್ಪ, ಬಯಪ ಅಧ್ಯಕ್ಷ ಶಾಂತಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಸಿ ಮಂಜುನಾಥ, ತಹಶೀಲ್ದಾರ್ ಅನಿಲ್ ಕುಮಾರ್, ಇಒ ಶ್ರೀನಾಥ್ ಗೌಡ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳಿಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

ಪಿ.ಸಿ.ಎಂ.ಬಿ ಕೋರ್ಸ್ ದಾಖಲಾತಿಗೆ ಅರ್ಜಿ ಅಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ. ಆಗಸ್ಟ್30(ಕ.ವಾ): ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2025-26 ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಕೋರ್ಸ್ಗಳ ದಾಖಲಾತಿಗಾಗಿ ಅರ್ಜಿ ಅಗ್ವಾನಿಸಲಾಗಿದೆ.

ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ75% ರಷ್ಟು ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ25% ರಷ್ಟು ಸ್ಥಾನಗಳನ್ನು ವರ್ಗವಾರು ಮೀಸಲಿರಿಸಲಾಗಿದೆ. ಉಚಿತ ಶಿಕ್ಷಣ. ಊಟ ಮತ್ತು ವಸತಿ, ಲೇಖನ ಸಾಮಾಗ್ರಿ, ಪಠ್ಯ ಪುಸ್ತಕ, ಶೂ ಸಾಕ್ಸ್, ಸಮವಸ್ತ್ರ, ಸಿಇಟಿ ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ತರಬೇತಿ ಹಾಗೂ ಇತರೆ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಡಾ .ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ & ಪದವಿ ಪೂರ್ವ ಕಾಲೇಜು(ಪ.ಜಾತಿ-711) ದೊಡ್ಡರಿ(ಸೋಂಪುರ), ನೆಲಮಂಗಲ ತಾಲ್ಲೂಕು ಇಲ್ಲಿಅರ್ಜಿಯನ್ನು ವಿತರಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಶ್ರೀಮತಿ eveera. ಪ್ರಾಂಶುಪಾಲರು-8495812105. ಶ್ರೀಮತಿ ಮಮತ.ಪಿ. ನಿಲಯಪಾಲಕರು-7760005440. ಮತ್ತು ಸುಜಾತ, ಪ್ರ.ದ.ಸ-6363837162 ಹಾಗೂ . ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.