--Ads--

ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ

On: September 4, 2025 10:12 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ

ಶಿಡ್ಲಘಟ್ಟ : ನಗರದಿಂದ ಟೋಲ್‌ಗೇಟ್ ಮೂಲಕ ಗೌಡನಕೆರೆಗೆ ಸಂಪರ್ಕಿಸುವ “ಶೆಟ್ಟಿ ಗುಣಿಯ ರಾಜ ಕಾಲುವೆ”ಗೆ ನಗರೋತ್ಥಾನ ಹಂತ 4 ರ ಅನುದಾನದಲ್ಲಿ ಸಿಮೆಂಟ್ ತಡೆಗೋಡೆ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ.

ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು ಸೂಕ್ತ ವಿಲೇವಾರಿ ಮಾಡಬೇಕಾದ ಗುತ್ತಿಗೆದಾರರು ಸಾಗಣೆ ವೆಚ್ಚ ಉಳಿಸಿಕೊಳ್ಳಲು ಸಮೀಪದಲ್ಲೆ ಇರುವ ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ನಗರಸಭೆ ಅಧಿಕಾರಿಗಳು ನೋಡಿ ನೋಡದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ.

ರಾಜಕಾಲುವೆಯಿಂದ ತೆಗೆಯುತ್ತಿರುವ ತ್ಯಾಜ್ಯ, ಮಣ್ಣು, ಕಸ ಕಡ್ಡಿಯನ್ನು ಗೌಡನ ಕರೆಗೆ ಲೋಡುಗಟ್ಟಲೆ ತ್ಯಾಜ್ಯವನ್ನು ಸುರಿಯುತ್ತಿದ್ದರೂ ತಾಲ್ಲೂಕು ಆಡಳಿತವೂ ನನಗೇನೂ ಸಂಬಂಧ ಇಲ್ಲ ಎನ್ನುವಂತೆ ಮೌನಕ್ಕೆ ಶರಣಾಗಿದೆ.
ನಗರಸಭೆ ಹಣದಲ್ಲಿ ರಾಜಕಾಲುವೆಯ ಹೂಳುತೆಗೆದು ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿ ಕೆರೆಗೆ ತುಂಬಿಸಲಾಗುತ್ತಿದೆ.

ಕೆರೆಗೆ ಕಟ್ಟಡಗಳ ಅವಶೇಷ, ತ್ಯಾಜ್ಯ ಮತ್ತು ರಾಜಕಾಲುವೆಯಿಂದ ತೆಗೆದ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿರುವುದನ್ನು ಕಂಡು ಸ್ಥಳದಲ್ಲಿದ್ದ ರೈತ ಸಂಘದ ಹಯಾತ್ ಖಾನ್ ಟ್ರ್ಯಾಕ್ಟರ್ ತಡೆದು ಕೆರೆಗೆ ಮಣ್ಣು ಸುರಿಯುವುದನ್ನು ವಿರೋಧಿಸಿ ತಡೆದಿದ್ದಾರೆ.

ಆಗ ರಾಜಕಾಲುವೆಯಲ್ಲಿ ಹೂಳು ತೆಗೆದು ಕೆರೆಗೆ ತುಂಬಿಸುತ್ತಿದ್ದ ಗುತ್ತಿಗೆದಾರ ಕೆ.ಬಿ.ಮಂಜುನಾಥ್ ಸ್ಥಳಕ್ಕೆ ಬಂದು, ಶಾಸಕರಾದ ರವಿಕುಮಾರ್ ಅವರು ಇಲ್ಲಿ ಮಣ್ಣುಹಾಕಿ ರಸ್ತೆ ಅಗಲ ಮಾಡು ಎಂದು ಹೇಳಿದ್ದು, ಹಾಗಾಗಿ ಅಗಲ ಮಾಡುತ್ತಿದ್ದೇನೆ ಎಂದು ಸಮಜಾಯಿಷಿ ನೀಡಿದ್ದಾರೆ.

ನಂತರ ನಗರಸಭೆ ಆಯುಕ್ತ ಅಮೃತ ಅವರು ಕೂಡ ಸ್ಥಳಕ್ಕೆ ಆಗಮಿಸಿ ಕೆರೆಯಂಚಿನಲ್ಲಿ ಮಣ್ಣು ಸುರಿಯುತ್ತಿರುವುದು ಏಕೆ, ಯಾರು ಹೇಳಿದ್ದು ಎಂದು ಪ್ರಶ್ನಿಸಿದ್ದಾರೆ. ಗುತ್ತಿಗೆದಾರ ಇಲ್ಲಿ ಯಾರೋ ಕಟ್ಟಡಗಳ ಅವಶೇಷವನ್ನು ತಂದುಗುಡ್ಡೆ ಹಾಕಿದ್ದರು ಶಾಸಕರು ಹೇಳಿದ್ದಕ್ಕೆ ಹಸನು ಮಾಡುತ್ತಿದ್ದೇನೆ ಎಂದು ಪೌರಾಯುಕ್ತರನ್ನು ದಿಕ್ಕು ತಪ್ಪಿಸಿದ್ದಾರೆ. ಪೌರಾಯುಕ್ತರು ಕೂಡ ಇಲ್ಲಿ ಹಾಕಬೇಡಿ ಎಂದಷ್ಟೆ ಹೇಳಿ ಏನೂ ಕ್ರಮ ತೆಗೆದುಕೊಳ್ಳದೆ ಅಲ್ಲಿಂದ ಹೊರಟು ಹೋದರು.

ಸ್ಥಳಕ್ಕೆ ಮಾಧ್ಯಮದವರು ಬಂದು ಕೆರೆಗೆ ಮಣ್ಣನ್ನು ಸುರಿಯುತ್ತಿರುವುದನ್ನು ವಿಡಿಯೋ ಚಿತ್ರೀಕರಣ ಮಾಡಲು ಮುಂದಾದಾಗ ಕೆರೆ ಅಂಚಿನಲ್ಲಿ ಗುಡ್ಡೆಹಾಕಿದ್ದ ಕಸ ಕಡ್ಡಿ, ಮಣ್ಣಿನ ರಾಶಿಯನ್ನು ಮತ್ತೆ ಟ್ರ್ಯಾಕ್ಟರ್‌ಗೆ ತುಂಬಿಸಿ ವಾಪಸ್‌ ಕಳುಹಿಸಿದರು.

ಮಾಧ್ಯಮದವರು, ಅಧಿಕಾರಿಗಳು ಅಲ್ಲಿಂದ ಹೊರಟ ಮೇಲೆ ಇದೀಗ ಮಣ್ಣನ್ನು ಕೆರೆ ಅಂಚಿನ ಬದಲಿಗೆ ಕೆರೆಯ ಒಳಗೆ ಹಾಕಲಾಗುತ್ತಿದೆ. ಸರ್ಕಾರವು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕೆರೆಯ ಹೂಳೆತ್ತುವುದು ಒಂದು ಕಡೆಯಾದರೆ ಅದೇ ಸರ್ಕಾರದ ಭಾಗವಾದ ನಗರಸಭೆಯಿಂದ ಕೈಗೊಂಡ ರಾಜಕಾಲುವೆ ತಡೆಗೋಡೆ ನಿರ್ಮಾಣದ ವೇಳೆ ತ್ಯಾಜ್ಯ ಮಣ್ಣನ್ನು ಕೆರೆಗೆ ತುಂಬಿಸಲಾಗುತ್ತಿದೆ ಇದು ರೈತರ ಹಾಗು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದ ಶಾಸಕರ ಹೆಸರು ದರ್ಬಳಕೆ :

ಬಿ.ಎನ್.ರವಿಕುಮಾರ್ ಶಾಸಕರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಮೊದಲು ಮಾಡಿದ್ದೇ ಸ್ವಂತ ಹಣ ಖರ್ಚು ಮಾಡಿ ನಗರ ಹೊರವಲಯದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-234 ರ ಅಕ್ಕಪಕ್ಕದಲ್ಲಿ ರಾಶಿ ರಾಶಿ ಗುಡ್ಡೆ ಬಿದ್ದಿದ್ದ ಕಟ್ಟಡಗಳ ಅವಶೇಷ ತ್ಯಾಜ್ಯವನ್ನು ವಿಲೇವಾರಿ ಮಾಡಿ ನಾಗರಿಕರ ಪ್ರಕಂಸೆಗೆ ಪಾತ್ರರಾಗಿದ್ದರು ,ಆದರಿಗ ಮತ್ತೆ ಹೆದ್ದಾರಿ ಅಂಚಿನ ಗೌಡನಕೆರೆಗೆ ಹೂಳು ಹಾಗು ತ್ಯಾಜ್ಯದ ಮಣ್ಣನ್ನು ತುಂಬಿಸಲಾಗುತ್ತಿದೆ. ಲಕ್ಷ ,ಲಕ್ಷ ಸ್ವಂತ ಹಣ ಖರ್ಚು ಮಾಡಿ ರಸ್ತೆಯಂಚಿನಲ್ಲಿ ಮಣ್ಣನ್ನು ಕೆಗೆಸಿದ ಶಾಸಕರ ಹೆಸರನ್ನು ಗುತ್ತಿಗೆದಾರರು ದುರ್ಬಳಕೆ ಮಾಡಿಕೊಂಡರೆ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಚರ್ಚೆಗೆ ಈಡಾಗಿದೆ.

ನಗರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಅಥವಾ ಗೌಡನಕೆರೆಗೆ ಕಟ್ಟಡ ಅಥವಾ ಯಾವುದೆ ತ್ಯಾಜ್ಯ ಸುರಿದವರಿಗೆ ದಂಡ ಹಾಕಿ ಮತ್ತೆ ಮುಂದುವರಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಾಗೂ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ನಗರಸಭೆ
ಅಧಿಕಾರಿಗಳಿಗೆ ಈ ಹಿಂದೆಯೆ ಸೂಚಿಸಿದ್ದೇನೆ.

-ಬಿ.ಎನ್.ರವಿಕುಮಾರ್. ಶಾಸಕರು,
ಶಿಡ್ಲಘಟ್ಟ .

WhatsApp

Join Now

Telegram

Join Now

Instagram

Join Now