ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು
ವಿಜಯ ದರ್ಪಣ ನ್ಯೂಸ್…..
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ.10 : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ
ದೇವನಹಳ್ಳಿ ಕೋಟೆ, ಕುಂದಾಣ ಬೆಟ್ಟ, ಶ್ರೀ ಕೋಟೆ ವೇಣುಗೋಪಾಲಸ್ವಾಮಿ ದೇವಸ್ಥಾನ, ಆವತಿ ಬೆಟ್ಟ, ಶ್ರೀ ತಿಮ್ಮರಾಯಸ್ವಾಮಿ ದೇವಸ್ಥಾನ, ಆವತಿ ಕೆರೆ, ಶಿರಡಿ ಸಾಯಿ ಬಾಬಾ ದೇವಾಲಯ, ವೃಕ್ಷೋದ್ಯಾನ ಟ್ರೀ ಪಾರ್ಕ್, ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ.
ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಚಿಕ್ಕ ಮಧುರೆ, ಮಾಕಳಿ ದುರ್ಗ ಬೆಟ್ಟ, ಹುಲ್ಲುಕುಡಿ ಬೆಟ್ಟ.
ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಶಿವಗಂಗೆ ಬೆಟ್ಟ, ನಿಜಗಲ್ ಸಿದ್ದರಬೆಟ್ಟ, ಉದ್ದಾನ ವೀರಭದ್ರ ಸ್ವಾಮಿ ದೇವಸ್ಥಾನ, ಮಹಿಮಾ ರಂಗನಾಥ ಸ್ವಾಮಿ ದೇವಸ್ಥಾನ, ವೀರಭದ್ರ ಸ್ವಾಮಿ ದೇವಸ್ಥಾನ-ದೇವರ ಹೊಸಹಳ್ಳಿ, ಮಣ್ಣೇ(ಮಾನ್ಯಪುರ), ಶ್ರೀ ರಾಮಲಿಂಗೇಶ್ವರ ದೇವಸ್ಥಾನ-ಬರದಿ ಬೆಟ್ಟ.
ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಹೊಸಕೋಟೆ ಕೆರೆ(ದೊಡ್ಡ ಅಮಾನಿಕೆರೆ), ಧರ್ಮೇಶ್ವರ್ ದೇವಸ್ಥಾನ-ಕೊಂಡ್ರಹಳ್ಳಿ, ಕಾಲಭೈರವೇಶ್ವರ ದೇವಸ್ಥಾನ ಜಡಿಗೇನಹಳ್ಳಿ. ಕಾಲಕುಂಟೆ ರಂಗನಾಥ ಸ್ವಾಮಿ ದೇವಸ್ಥಾನ. ಸಪ್ತಮಾತೆಯ ದೇವಸ್ಥಾನ-ಜಡಿಗೆನಹಳ್ಳಿ ಈ ಸ್ಥಳಗಳನ್ನು ಜಿಲ್ಲೆಯ ಪ್ರಮುಖ 25 ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 12 ರಂದು ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ : ಕರ್ನಾಟಕ ರಾಜ್ಯ ಲೋಕಾಯುಕ್ತ ಸಂಸ್ಥೆಯಿಂದ ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಸೆಪ್ಟೆಂಬರ್ 12 ರ ಶುಕ್ರವಾರ ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಸಭಾಂಗಣ(ಆಡಿಟೋರಿಯಂ)ದಲ್ಲಿ ಹಮ್ಮಿಕೊಳ್ಳಲಾಗಿದೆ.
ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬ, ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ವಂಶಿಕೃಷ್ಣ , ಕರ್ನಾಟಕ ಲೋಕಾಯುಕ್ತ ವಿಚಾರಣೆಗಳು-1 ಉಪ ನಿಬಂಧಕರಾದ ಅರವಿಂದ ಎನ್.ವಿ, ಹಿರಿಯ ಶ್ರೇಣಿ ದಿವಾಣಿ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲ್ ಭೀಮಸೇನ ಬಗಾಡಿ ಅವರು ಉಪಸ್ಥಿತರಿರುತ್ತಾರೆ.