ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…..

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಸೆ 15 : ಭಾರತ ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ ತನ್ನದೇ ಆದ ಸಂವಿಧಾನವನ್ನು ಬರೆದು ಅಂಗೀಕರಿಸಿದೆ. ಜನತೆಗೆ ಸಂವಿಧಾನದ ಬಗ್ಗೆ ತಿಳಿಯಲು, ಬಲಿಷ್ಠ ರಾಷ್ಟ್ರ ಕಟ್ಟಲು ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ತತ್ವ ಮತ್ತು ಮಹತ್ವವನ್ನು ತಿಳಿಯಬೇಕು ಜೊತೆಗೆ ಬಲಿಷ್ಠ ಪ್ರಜಾಪ್ರಭುತ್ವ ಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎ ಬಿ ಬಸವರಾಜು ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಇವರುಗಳ ಸಹಭಾಗಿತ್ವದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಮಟ್ಟದಲ್ಲಿ ಬೈಕ್ ರೈಡರ್ ಗಳು ಮತ್ತು ಜಿಲ್ಲಾ ಮಟ್ಟದಲ್ಲಿ ಸೈಕಲ್ ಜಾಥ ಮಾಡುತ್ತಾ ಪ್ರಜಾಪ್ರಭುತ್ವ ಜಾಗೃತಿ ಮೂಡಿಸುತ್ತಿದ್ದೇವೆ ಜೊತೆಗೆ ಕಳೆದ ಮೂರು ದಿನಗಳಿಂದ ಎಲ್ಲ ತಾಲೂಕಿನಲ್ಲಿ ಇದರ ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಈ ದಿನ ಪ್ರತಿಯೊಬ್ಬರೂ ಕೂಡ ಪಾಲ್ಗೊಳ್ಳಬೇಕೆಂದು ನನ್ನ ಮತ ನನ್ನ ಹಕ್ಕು ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.

ಕಳೆದ ವರ್ಷ ಅದ್ದೂರಿಯಾಗಿ ಚಾಮರಾಜನಗರದಿಂದ ಬೀದರ್ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಾಣ ಮಾಡಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುವ ರೀತಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು.

ಸಂವಿಧಾನದ 324ನೇ ವಿಧಿ ಭಾರತ ಚುನಾವಣಾ ಆಯೋಗ ದೇಶದಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ ಶೇಕಡ 98 ಜನಸಂಖ್ಯೆ ಮತದಾರರ ಪಟ್ಟಿಯಲ್ಲಿದ್ದಾರೆ ಮೊದಲಿಗೆ ಇಲ್ಲಿಯವರೆಗೂ ಕೂಡ ಮತದಾರರನ್ನು ಮತದಾನ ಪಟ್ಟಿಗೆ ಸೇರಿಸುವ ಕೆಲಸ ಮಾಡುತ್ತಾ ಬಂದಿದೆ. ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಲ್ಲಿಯೂ ಕೂಡ ಮತದಾರರನ್ನು ಮತದಾನ ಪಟ್ಟಿಗೆ ಮತದಾರರನ್ನು ಸೇರಿಸುವ ಪ್ರಕ್ರಿಯೆಯನ್ನು ಮಾಡುತ್ತಿದ್ದೇವೆ. ಮತನ ಮತದಾನದಿಂದ ಯಾರೊಬ್ಬರೂ ವಂಚಿತರಾಗದಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರಿಸುವಂತಹ ಕೆಲಸ ಮಾಡುತ್ತಿದ್ದೇವೆ,

ಬೀದರ್ ನಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಷ್ಟ್ರದಾದ್ಯಂತ ಚರ್ಚೆಯಲ್ಲಿದೆ ಅದೇ ರೀತಿ ನಮ್ಮ ನಮ್ಮ ರಾಷ್ಟ್ರದಲ್ಲೂ ವಿಶೇಷ ತೀರ ಮತದಾರರ ಪರಿಷ್ಕರಣ ಪಟ್ಟಿಯನ್ನು ತಯಾರಿಸಲು ಪೂರ್ವ ಸಿದ್ಧತೆಗಳು ಮಾಡಿಕೊಳ್ಳುತ್ತಿದ್ದೀರಿ ಅದರಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಮನೆ ಮನೆಗೆ ಬಂದು ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಸಂದರ್ಭದಲ್ಲಿ ಮತದಾರರು ಸಹಕರಿಸಬೇಕಾಗಿದೆ ಬೇರೆಯವರು ಬಂದು ಮತದಾನ ಮಾಡಿದ್ದಾರೆ ಎಂಬ ಭಯ ತೊಡೆದುಹಾಕಿ ಜನಸಂಖ್ಯೆ ಆಧಾರದ ಮೇಲೆ ಹೊಸಬರನ್ನು ಸೇರಿಸಿಸುವ ಪ್ರಕ್ರಿಯೆ ಬಂದಿದೆ ಹಾಗಾಗಿ ಎಲ್ಲರೂ ಕೂಡ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ರಾಜಣ್ಣ ಅವರು ಮಾತಾನಾಡಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಾಗಿ ಆಚರಿಸಲಾಯಿತು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮನಾದ ನ್ಯಾಯ ಸಿಗಬೇಕು ಎಂಬುದು ಗಾಂಧೀಜಿ ಅವರ ಆಶಯವಾಗಿತ್ತು ಅದರಂತೆ ಡಾ.ಬಿ.ಆರ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತದ ಬೃಹತ್ ಸಂವಿಧಾನ ರಚಿಸಲಾಯಿತು. ಸುರಕ್ಷಿತ ಯುವ ಸಮುದಾಯ ಪ್ರಜಾಪ್ರಭುತ್ವ ದೇಶದ ಒಂದು ದೊಡ್ಡ ಆಸ್ತಿ ಇದ್ದಂತೆ. ಉತ್ತಮ ಶಿಕ್ಷಣದ ಮೂಲಕ ಯುವಪೀಳಿಗೆಗೆ ಶಕ್ತಿ ತುಂಬಬೇಕಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ ರಾಮ್ ಅವರನ್ನು ನಾವು ಸ್ಮರಿಸುವ ಮೂಲಕ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸೋಣ. ಇಡೀ ವಿಶ್ವದಲ್ಲೇ ಭಾರತದ ಪ್ರಜಾಪ್ರಭುತ್ವಕ್ಕೆ ವಿಶಿಷ್ಟ ಸ್ಥಾನವಿದೆ. ನಾವೆಲ್ಲರೂ ಸೇರಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡೋಣ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎನ್.ಬಿ. ಸತೀಶ್ ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ ಎನ್ ಅನುರಾಧ, ಪುರಸಭೆ ಮಾಜಿ ಅದ್ಯಕ್ಷ ಮೂರ್ತಿ, ತಾಲ್ಲೂಕು ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.