ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ
ವಿಜಯ ದರ್ಪಣ ನ್ಯೂಸ್….
ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ
ದೊಡ್ಡಬಳ್ಳಾಪುರ ಬೆಂಗಳೂರು ಗ್ರಾ.ಜಿಲ್ಲೆ. ಸೆಪ್ಟೆಂಬರ್ 17: ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.
ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಅವರು ಮಾತನಾಡಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಿರಿಯರು ಪಾಲ್ಗೊಳ್ಳವುದರಿಂದ ಮಾನಸಿಕ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಜೊತೆಗೆ ಹಿರಿಯರಿಗೆ ಗೌರವ ನೀಡಿ ಅವರಲ್ಲಿ ಮನೋಲ್ಲಾಸದ ಜೊತೆಗೆ ಮನೋರಂಜನೆ ಸಿಕ್ಕಂತಾಗುತ್ತದೆ. ಈ ರೀತಿಯ ಕ್ರೀಡಾ ಚಟುವಟಿಕೆಗಳಲ್ಲಿ ಹಿರಿಯರು ಪಾಲ್ಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಮುದ್ದಣ್ಣ ಎಂ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯಾದ ಸತೀಶ ಪಾಣಿ, ಶಿಶು ಅಭಿವೃದ್ದಿ ಯೋಜನಾಧಿಕಾರಿಯಾದ ವಿನೋದ್‌ರಾಜ್, ಅಧಿಕಾರಿಗಳು, ಹಿರಿಯ ನಾಗರಿಕರು ಭಾಗವಹಿಸಿದ್ದರು.
₹₹₹₹₹₹₹₹₹₹₹₹₹₹₹₹$₹₹₹₹₹₹₹₹₹₹₹₹₹₹₹₹₹₹₹₹
ಸೆಪ್ಟೆಂಬರ್ 18 ರಂದು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ ಗ್ರಾ ಜಿಲ್ಲೆ, ಸೆ, 17 :ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಗಾರ ಮತ್ತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾಗಿದ್ದು ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೆರಿಸಲಿದ್ದಾರೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹೆಚ್.ಎಂ ರೇವಣ್ಣ, ಉಪಾಧ್ಯಕ್ಷರಾದ ಸೂರಜ್ ಎಂ.ಎನ್ ಹೆಗಡೆ, ಕರ್ನಾಟಕ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಮತ್ತು ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರುಘನ ಉಪಸ್ಥಿತಿ ಇರಲಿದೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರು ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು, ರಾಮೋಜಿ ಗೌಡ, ದೊಡ್ಡಬಳ್ಳಾಪುರದ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ.ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ.ಶಾಂತಕುಮಾರ್, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹಾಗೂ ಹೊಸಕೋಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು, ಆಲೂರು ಗ್ರಾಮ ಪಂಚಾಯತಿಯ ಅಧ್ಯಕ್ಷರು ಜಯಲಕ್ಷ್ಮಮ್ಮ ಇರುವರು.
ಸರ್ಕಾರದ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳ, ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.