--Ads--

ರೈತರಿಗೆ ಅನುಕೂಲವಾಗಲು ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ : ಶಾಸಕ ಬಿ.ಎನ್‌.ರವಿಕುಮಾರ್

On: September 19, 2025 1:07 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ರೈತರಿಗೆ ಅನುಕೂಲವಾಗಲು ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ : ಶಾಸಕ ಬಿ.ಎನ್‌.ರವಿಕುಮಾರ್

ಶಿಡ್ಲಘಟ್ಟ : ನಗರದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಶಾಸಕ ಬಿ.ಎನ್‌.ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳೊಂದಿಗೆ ಅವರು ಸಂತೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ನಗರೋತ್ಥಾನ ಯೋಜನೆ 4ನೇ ಹಂತದಲ್ಲಿ 4 ಕೋಟಿ 65 ಲಕ್ಷ ರೂ.ಗಳನ್ನು ಈ ಅಭಿವೃದ್ಧಿ ಕಾರ್ಯಕ್ಕೆ ಮೀಸಲಿಡಲಾಗಿದ್ದು, ಬೆಳಗಾವಿಯಲ್ಲಿ ನಿರ್ಮಿಸಿರುವ ಸಂತೆ ಮೈದಾನದ ಮಾದರಿಯಲ್ಲಿ ನಗರದ ಸಂತೆ ಮೈದಾನವನ್ನು ರೂಪಿಸಲು ಅಧಿಕಾರಿಗಳಿಗೆ ವಿವರಿಸಿದರು.

ದಿನಪೂರ್ತಿ ವ್ಯಾಪಾರದಲ್ಲಿ ನಿರತರಾಗಿರುವ ವ್ಯಾಪಾರಿಗಳಿಗೆ ಬಿಸಿಲು-ಮಳೆಯಿಂದ ರಕ್ಷಣೆ ಒದಗಿಸಲು ಮೇಲ್ಟಾವಣಿ ನಿರ್ಮಾಣ ಅಗತ್ಯವಿದೆ ಎಂದರು.

ಇದರೊಂದಿಗೆ ಊಟದ ಕ್ಯಾಟೀನ್, ಶೌಚಾಲಯ,ವಾಹನ ನಿಲುಗಡೆ ಸ್ಥಳ ಹಾಗೂ ಸ್ವಚ್ಛತಾ ವ್ಯವಸ್ಥೆಗಳನ್ನು ತುರ್ತಾಗಿ ಕಲ್ಪಿಸಬೇಕು ಹಾಗು ಮಳೆಗಾಲದಲ್ಲಿ ನೀರು ನಿಂತುಕೊಳ್ಳದಂತೆ ಸಮರ್ಪಕ ನೀರು ಹರಿವಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಸಂತೆಗೆ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಿ ಗೇಟ್ ಅಳವಡಿಸಲು ಹಾಗೂ ಈ ಸಂಬಂಧಿತ ಕ್ರಿಯಾ ಯೋಜನೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ, ಸದಸ್ಯ ಅನಿಲ್ ಕುಮಾರ್, ಪೌರಾಯುಕ್ತೆ ಜಿ.ಅಮೃತ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರೆ ಮಾಧವಿ, ಎಇಇ ರಘುನಾಥ್, ಮುಖಂಡ ತಾದೂರುರಘು, ಜಿಲ್ಲಾ ಸಹಕಾರಿ ಸಂಘದ ಮುರಳಿ ,ನವೀನ್ ಮತ್ತೀತರರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ರಾಜಕಾರಣಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ದೇಶವು ಪ್ರಗತಪತದತ್ತ ಸಾಗಲಿದೆ : ಶಾಸಕ ಬಿ.ಎನ್.ರವಿಕುಮಾ‌ರ್

ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು  ವಿವಿಧ ಸಂಘಟನೆಗಳಿಂದ ಸನ್ಮಾನ

ಜಿಕೆವಿಕೆ ವಿದ್ಯಾರ್ಥಿಗಳಿಂದ ಸಾಮಾಜಿಕ ಹಾಗೂ ಋತುಮಾನ ನಕ್ಷೆಗಳ ಪ್ರದರ್ಶನ

ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು : ಉಪನ್ಯಾಸಕಿ ವಾಣಿ

ಪುಟ್ ಪಾತ್ ಒತ್ತವರಿ ತೆರವುಗೊಳಿಸಲು ಅಂಗಡಿ ಮಾಲಿಕರಿಗೆ ನಗರಠಾಣೆ ಪಿಎಸ್ಐ ಸೂಚನೆ

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ : ಎಸ್.ಎಸ್.ಅಬೀದ್