ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…

ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ

ಬೆಂ.ಗ್ರಾಂ.ಜಿಲ್ಲೆ. ಸೆ. 30

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರ ಗ್ರಾಮದ ಗಾಂಧಿ ಭವನದಲ್ಲಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ನೆರವೇರಿಸಲಿದ್ದಾರೆ.

5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಘನ ಉಪಸ್ಥಿತರಿರುವರು.

ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ಎನ್ ನಾಗರಾಜ್ (ಎಂ.ಟಿ.ಬಿ), ರಾಮೋಜಿಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ರಾಜಣ್ಣ, ದೇವನಹಳ್ಳಿ ತಾಲ್ಲೂಕು , ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ ಶಾಂತಕುಮಾರ್, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ.ಜಾಫರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ ಬಾಬಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ ಅವರು ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರ ವಿವರ

ಬೆಂ. ಗ್ರಾ. ಜಿಲ್ಲೆ, ಸೆ.30 :

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಕೃತಿಕಾ.ಎನ್ ಹಾಗೂ ದ್ವಿತೀಯ ಸ್ಥಾನ ರಮ್ಯಶ್ರೀ.ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ. ತೃತೀಯ ಸ್ಥಾನ ನಿಸರ್ಗ ಸರ್ಕಾರಿ ಪ್ರೌಢ ಶಾಲೆ ಸೋಲದೇವನಹಳ್ಳಿ ನೆಲಮಂಗಲ.

ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ ಸ್ಥಾನ ಬಿಂದುಶ್ರೀ.ಜೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ ಟೌನ್. ದ್ವಿತೀಯ ಸ್ಥಾನ ತಾರಾ ಶ್ರೀ ಕೊಂಗಡಿಯಪ್ಪ ಪದವಿ ಪೂರ್ವ ಕಾಲೇಜು ದೊಡ್ಡಬಳ್ಳಾಪುರ.
ತೃತೀಯ ಸ್ಥಾನ ಹರ್ಷಿತ.ವಿ ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ.

ಪದವಿ ಅಥವಾ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನ ಮಿಥುನ್.ಕೆ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ. ದ್ವಿತೀಯ ಸ್ಥಾನ ಹರ್ಷಿತ.ಎನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ. ತೃತೀಯ ಸ್ಥಾನ ದೀಪಿಕ.ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೆಲಮಂಗಲ.

ಗಾಂಧೀಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 02 ರ ಗಾಂಧಿ ಜಯಂತಿಯಂದು ಬಹುಮಾನ ವಿತರಣೆ ಮಾಡಲಾಗುವುದು.