ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು :  ಶಾಸಕ ಬಿ.ಎನ್. ರವಿಕುಮಾರ್

ವಿಜಯ ದರ್ಪಣ ನ್ಯೂಸ್…

 ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು :  ಶಾಸಕ ಬಿ.ಎನ್. ರವಿಕುಮಾರ್

ಶಿಡ್ಲಘಟ್ಟ : ಆದರ್ಶ ರಾಜನ ನಡುವಳಿಕೆ ಹಾಗೂ ಆದರ್ಶ ಪತ್ನಿಯ ಕರ್ತವ್ಯಗಳನ್ನು ಸಮಾಜಕ್ಕೆ ಸಾರಿ ಹೇಳುವ ರೀತಿಯಲ್ಲಿ ರಾಮಾಯಣ ರಚನೆ ಮಾಡಿರುವ ಮಹರ್ಷಿವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ
ಅವರು ಮಾತನಾಡಿದರು.

ಮಹಾಕಾವ್ಯ ರಾಮಾಯಣ ಕೃತಿಯ ಮೂಲಕ ಸಮಾಜದಲ್ಲಿನ ಪ್ರತಿಯೊಬ್ಬ ಮಾನವನು ಸನ್ಮಾರ್ಗವನ್ನು ಕಾಣುವಂತಹ ಅವಕಾಶವನ್ನು ಮಹರ್ಷಿ ವಾಲ್ಮೀಕಿ ಅವರು ಒದಗಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಮಹಾಕಾವ್ಯ ರಾಮಾಯಣ ಬರೆದ ವಾಲ್ಮೀಕಿ ಮಹರ್ಷಿಗಳ ಆದರ್ಶಗಳು ಇಂದಿಗೂ ಸಮಾಜಕ್ಕೆ ಬೆಳಕಾಗಿವೆ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ನಾಗರಿಕರು ಅವರ ತತ್ವಗಳನ್ನು ಅನುಸರಿಸಿದರೆ ಸಮಾಜದ ಸುಧಾರಣೆ ಖಚಿತ ಎಂದರು.

ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ ಡಾ.ಚನ್ನನರಸಿಂಹಪ್ಪ ಅವರು ಮುಖ್ಯ ಭಾಷಣ ಮಾಡಿದರು.

ಇದೇ ವೇಳೆ ಸಮುದಾಯದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ತಲಕಾಯಲಬೆಟ್ಟದಲ್ಲಿನ ವಾಲ್ಮೀಕಿ ದೇವಾಲಯದಲ್ಲಿ ಹಾಗೂ ನಗರದ ಮಯೂರ ವೃತ್ತದಲ್ಲಿನ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಪಲ್ಲಕಿಗಳ ಉತ್ಸವ,
ಜನಪದ ಕಲಾ ತಂಡಗಳ ಮೆರವಣಿಗೆಯು ನಡೆಯಿತು.
ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ವಾಲ್ಮೀಕಿ ಸಮುದಾಯದವರು ನಗರದ ಪ್ರಮುಖ ಬೀದಿಗಳಲ್ಲಿ ವಾಲ್ಮೀಕಿಯವರ ಬೃಹತ್ ಪಲ್ಲಕ್ಕಿ ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪಿ.ಎಲ್.ಡಿ.ಬ್ಯಾಂಕ್ ಅದ್ಯಕ್ಷ ಬಂಕ್ ಮುನಿಯಪ್ಪ, ತಹಸೀಲ್ದಾರ್ ಗಗನಸಿಂಧೂ, ತಾಲ್ಲೂಕು ಪಂಚಾಯತಿ ಇಓ ಹೇಮಾವತಿ, ನಗರಸಭೆ ಪೌರಾಯುಕ್ತೆ ಅಮೃತ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ,ಸಮಾಜ ಕಲ್ಯಾಣಾದಿಕಾರಿ ಜಗದೀಶ್,ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ,ಶಿವಾರಡ್ಡಿ, ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ,ಗುತ್ತಿಗೆದಾರ ಕೆ.ಬಿ.ಮಂಜುನಾಥ್, ಮೇಲೂರು ಗಿರೀಶ್,ಮುತ್ತೂರು ವೆಂಕಟೇಶ್ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.