--Ads--

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದೆ ಆದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ: ಶಾಸಕ ಸಿ ಎನ್ ರವಿಕುಮಾರ್ 

On: October 22, 2025 6:06 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದೆ ಆದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ: ಶಾಸಕ ಸಿ ಎನ್ ರವಿಕುಮಾರ್

ಶಿಡ್ಲಘಟ್ಟ : ಮುಂಬರುವ 2028 ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದೆ ಆದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು.

ಮೇಲೂರಿನ ತಮ್ಮ ಸ್ವಗೃಹದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾತನಾಡಿದ ಅವರು ಕಾಂಗ್ರೆಸ್‌ ಪಕ್ಷಕ್ಕೆ ಮತದಾರರು 136 ಸ್ಥಾನಗಳನ್ನು ಕೊಟ್ಟರು ಆದರೆ ಒಂದೂವರೆ ವರ್ಷದ ನಂತರ ನಡೆದ ಸಂಸತ್ ಚುನಾವಣೆಯಲ್ಲಿ 224 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದ 143 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿತು ಎಂದರೆ ಇದರರ್ಥ ಏನು ಎಂದು ಪ್ರಶ್ನಿಸಿದ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಅಧಿಕಾರಕ್ಕೆ ಬರಲಿದ್ದು, ಎಚ್‌ಡಿಕೆ 3 ನೇ ಬಾರಿ. ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರು ಗ್ಯಾರಂಟಿ ಎಂದು ಹೇಳಿದರು.

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಅನಾರೋಗ್ಯದಿಂದ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ಮರಳಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಅವರ ಆಶೀರ್ವಾದದಿಂದ ಹೆಚ್.ಡಿ‌.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ ಎಂದರು.

2023 ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಜನರಿಗೆ ಘೋಷಿಸಿದ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬರಲಿಲ್ಲ ಬದಲಿಗೆ ಅದಕ್ಕೂ ಮುನ್ನ ಮೂರೂವರೆ ವರ್ಷ
ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೈಗೊಂಡ ಕೆಲ ತಪ್ಪು ನಿರ್ಧಾರಗಳಿಂದ ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಶಿಡ್ಲಘಟ್ಟಕ್ಕೆ ಆಗಮಿಸಲಿದ್ದು ಅಂದು ಹೈಟೆಕ್‌ ರೇಷ್ಮೆಗೂಡು ಮಾರುಕಟ್ಟೆ, ರಾಮಸಮುದ್ರ ಕೆರೆಯಿಂದ ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರು ಸರಬರಾಜು ಹಾಗು ಒಳಚರಂಡಿ 2ನೇ ಹಂತರದ ಯೋಜನೆ ಸೇರಿದಂತೆ ಜಿಲ್ಲೆಯ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ, ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದರು.

ನವೆಂಬರ್-8ರಂದು ಮುಖ್ಯಮಂತ್ರಿ ಸಿದ್ದರಾಮಣ್ಣ ಅವರ ಕಾರ್ಯಕ್ರಮ ನಿಗದಿಯಾಗಿತ್ತಾದರೂ ಅಂದು ‘ಕನಕ ಜಯಂತಿ’ ಇರುವ ಕಾರಣ ಶಿಡ್ಲಘಟ್ಟ ಕಾರ್ಯಕ್ರಮವನ್ನು ಮುಂದೂಡಿದ್ದು, ನವೆಂಬರ್-24ರಂದು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಹೇಳಿದ್ದಾರೆ ಎಂದರು.

ಅಂದು ಜಿಲ್ಲೆಯ 5 ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯಲಿರುವ ನಾನಾ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ, ಉದ್ಘಾಟನೆ ನೆರವೇರಿಸಲಿದ್ದು, ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದಲ್ಲೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಅವರು ತೀರ್ಮಾನಿಸಿರುವುದು ಸ್ವಾಗತಾರ್ಹ,ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಬಳಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ತಿಳಿಸಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.

WhatsApp

Join Now

Telegram

Join Now

Instagram

Join Now