--Ads--

ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ

On: October 25, 2025 3:40 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

60 ಲಕ್ಷ ವೆಚ್ಚದ ಹಾರೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ

ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ

ಹಾರೋಹಳ್ಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್. 25: ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ವಿವಿಧ ಜನಪರ, ಅಭಿವೃದ್ಧಿ ಪರ ಕೆಲಸ ಕಾರ್ಯಗಳನ್ನು ಕೈಗೊಂಡು ಜಿಲ್ಲೆಗೆ ಮಾದರಿ ಪಂಚಾಯಿತಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ, ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿಗಳು ಮಾದರಿ ಕಟ್ಟಡ ಹೊಂದುವ ಜತೆಗೆ ಸರ್ಕಾರದ ಜನಪರ ಯೋಜನೆಗಳು ಹಾಗೂ ಸರ್ಕಾರದ-ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಗ್ರಾಮ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಬೇಕು.ನಿವೇಶನ, ವಸತಿ ರಹಿತರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಸಿ.ಎಸ್ ಶ್ರೀನಾಥ್ ಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ. ರಾಜಣ್ಣ, ಬಯಪ ಅಧ್ಯಕ್ಷ ವಿ. ಶಾಂತಕುಮಾರ್, ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾದೇವಿ ಮಂಜುನಾಥ್, ಉಪಾಧ್ಯಕ್ಷೆ  ನರಸಮ್ಮ ಪೂಜಪ್ಪ, ಬಮೂಲ ನಿರ್ದೇಶಕ ಎಸ್.ಪಿ ಮುನಿರಾಜು, ಕೆಪಿಸಿಸಿ ಸದಸ್ಯ ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಹಾರೋಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಎಸ್.ಎಂ.ಡಿ ಇಸಾಕ್, ಕಾರ್ಯದರ್ಶಿ ರಾಜೇಶ್ ಸೇರಿದಂತೆ ಹಾರೋಹಳ್ಳಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಹೊಸಕೋಟೆಯಲ್ಲಿ ಮತದಾರರ ಜಾಗೃತಿ ಮ್ಯಾರಾಥಾನ್ ಹಾಗೂ SIR ವಿಶೇಷ ಆಂದೋಲನಕ್ಕೆ ಜಿ. ಪಂ. ಸಿಇಒ ಡಾ.ವಾಸಂತಿ ಅಮರ್ ಚಾಲನೆ

ದೇವನಹಳ್ಳಿ ತಾಲ್ಲೂಕು ಆಡಳಿತ ಸೌಧದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ: ಮತದಾರರ ನೋಂದಣಾಧಿಕಾರಿ (ERO) 

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ