--Ads--

ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕಮಾರ್

On: October 30, 2025 3:24 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕುಮಾರ್

ವಿಜಯಷುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ .29:

ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಡಾ.ಬಿ.ಆರ್. ಅಂಬೇಡ್ಕರ್ ರಕ್ಷಣಾ ಸಮಿತಿಯ ವತಿಯಿಂದ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳು, ಬ್ಯಾಗುಗಳನ್ನು ವಿತರಣೆ ಮಾಡಿ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಪುರಸಭೆ ಸದಸ್ಯ ವಿ ನಂದಕುಮಾರ್ ಮಾತನಾಡಿ, ಪವರ್ ಸ್ಟಾರ್  ಡಾ ಪುನಿತ್ ರಾಜ್ ಕುಮಾ‌ರ್ ಅವರು, ಬೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರು, ಮಾಡಿರುವ ಸಾಮಾಜಿಕ ಕಾರ್ಯಕ್ರಮಗಳು ನಮ್ಮ ಮುಂದೆ ಇವೆ. ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಮೂಲಕ ಅವರು ಸದಾ ನಮ್ಮೊಂದಿಗೆ ಇರುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರು, ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ಯುವಕರು ಅವರನ್ನು ಆದರ್ಶವಾಗಿ ತೆಗೆದುಕೊಳ್ಳ ಬೇಕು. ವಿಜಯಪುರ ಬಸ್ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ನಿಲ್ದಾಣವೆಂದು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡ ಕೆ.ಎಂ.ಮಧುಮಹೇಶ್ ಮಾತನಾಡಿ, ಪುನೀತ್ ರಾಜ್ ಕುಮಾರ್ ಅವರು ಇಂದಿಗೂ ನಮ್ಮೊಂದಿಗೆ ಇದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ನಾವೆಲ್ಲರೂ ಮಾದರಿಯಾಗಿ ತೆಗೆದು ಕೊಳ್ಳಬೇಕು. ಅವರು, ಮಾಡುತ್ತಿದ್ದ ಸಾಮಾಜಿಕ ಕಾರ್ಯಕ್ರಮಗಳನ್ನು ನಾವು ಮುಂದುವರೆಸಿಕೊಂಡು ಹೋದಾಗ ಮಾತ್ರ. ಅವರಿಗೆ ನಾವು ಗೌರವ ಕೊಟ್ಟಂತಾಗುತ್ತದೆ ಎಂದರು.

ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಭಾನುಚಂದ್ರ ಮಾತನಾಡಿ, ನಾವು ಬಸ್ ನಿಲ್ದಾಣದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪುತ್ತಳಿಯನ್ನು ಪ್ರತಿಷ್ಟಾಪನೆ ಮಾಡುವ ಮೂಲಕ ಅವರು, ಮತ್ತು ಅವರು ಸಮಾಜಕ್ಕಾಗಿ ಮಾಡಿರುವ ಉತ್ತಮ ಕಾರ್ಯಗಳ ಕುರಿತು, ಯುವಪೀಳಿಗೆ ಅರಿವು ಮೂಡಿಸುವುದರ ಜೊತೆಗೆ, ಯುವಪೀಳಿಗೆಯನ್ನು ಅವರ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡಬೇಕೆನ್ನುವ  ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದ್ದೇವೆ. ಪಟ್ಟಣದ ಪುರಸಭೆ ಅಧ್ಯಕ್ಷರೂ ಸೇರಿದಂತೆ ನಾಗರಿಕರು ಪ್ರೋತ್ಸಾಹ ನೀಡುತ್ತಿರುವುದು ಸಂತಸ ತಂದಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಗೌಸ್ ಖಾನ್, ಮುಖಂಡರಾದ ಸೈಫುಲ್ಲಾ , ಸುರೇಶ್, ಮಂಜುನಾಥ್, ವೆಂಕಟೇಶ್, ಮುನ್ನಾಖಾನ್, ಸೇರಿದಂತೆ ಮುಖಂಡರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now