ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್…

ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ ನವಂಬರ್ 1 : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಆಚರಣೆ ಮಾಡಲಾಯಿತು.
ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಭಾಷೆ ಉಳಿಸುವ ಹೋರಾಟಗಳು ನಡೆಯುತ್ತಲೇ ಇವೆ. ಮೈಸೂರು ಮತ್ತು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ತಮಿಳು, ತೆಲುಗು, ಮರಾಠಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳನ್ನು ಮಾತನಾಡುವ ಜನರು ನಮ್ಮ ರಾಜ್ಯದಲ್ಲಿದ್ದಾರೆ. ನಮ್ಮ ರಾಜ್ಯವು ಹಲವು ಭಾಷೆಗಳ ನೆಲೆಯಾಗಿದೆ. ಸಂವಿಧಾನದಲ್ಲಿ ಭಾಷೆಗಳಿಗೆ ಮಾನ್ಯತೆ ನೀಡಲಾಗಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ, ಮಂಗಳೂರು ಸೇರಿದಂತೆ ರಾಜ್ಯದಲ್ಲಿ ವಿಭಿನ್ನವಾಗಿ ಕನ್ನಡ ಭಾಷೆಯನ್ನು ಮಾತನಾಡುವುದು ವಿಶೇಷವಾಗಿದೆ.

ಎಲ್ಲರನ್ನು ಒಗ್ಗೂಡಿಸುವ ಭಾಷೆ ಇದಾಗಿದ್ದು, ನಮ್ಮ ಸರ್ಕಾರವು ಕನ್ನಡ ಭಾಷೆಗೆ ಮೊದಲ ಆದ್ಯತೆಯನ್ನು ನೀಡುತ್ತಾ ಬಂದಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆಯನ್ನು ಮಾತನಾಡುವವರೇ ಕಡಿಮೆಯಾಗಿದ್ದಾರೆ. ಇತ್ತೀಚಿನ ಮಕ್ಕಳಲ್ಲಿಯೂ ಕನ್ನಡ ಭಾಷೆ ಮರೆಯಾಗುತ್ತಿದೆ. ಕನ್ನಡವನ್ನು ಬಳಸದೆ ಇರುವುದು ಬೇಸರ ತರುತ್ತದೆ. ನಾನು ಶಾಲೆಯಲ್ಲಿ ಓದುತ್ತಿದ್ದಾಗ
ಇಂಗ್ಲಿಷ್ ಮಾಧ್ಯಮ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಮಾತನಾಡಿದರೆ ಫೈನ್ ಹಾಕ್ತಾ ಇದ್ರು, ಅದು ಈಗಲೂ ಶಾಲೆಯಲ್ಲಿ ಇದೀಯಾ‌ ಎಂದು ಪ್ರಶ್ನಿಸಿದರು. ಒಂದು ದಿನಕ್ಕೆ ಮಾತ್ರ ಕನ್ನಡ ಭಾಷೆ ಸೀಮಿತವಾಗದೆ ಪ್ರತಿನಿತ್ಯ ನಾವು ಬಳಸುವ ಮಾತಿನಲ್ಲಿ ಕನ್ನಡವನ್ನು ಮಾತನಾಡಿದರೆ ಭಾಷೆ ಉಳಿಸಲು ಸಾಧ್ಯವಾಗುತ್ತದೆ ಎಂದರು.

ಇನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ತಾಲ್ಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಅಧ್ಯಕ್ಷ ಶ್ರೀಕಂಠ, ಸಾಹಿತಿ ಡಾ.ಸಿ ನಾಗಣ್ಣ, ಡಿವೈಎಸ್ಪಿ ರಘು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪೌರಾಯುಕ್ತ ವಿಜಯ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್ ಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಕನ್ನಡ ಭಾಷೆ ಮಾತನಾಡುತ್ತಿಲ್ಲ ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಇನ್ನು ಮುಂದೆ ನಮ್ಮ ನಂಜನಗೂಡು ತಾಲ್ಲೂಕಿನಲ್ಲಿರುವ ಎಲ್ಲಾ ಬ್ಯಾಂಕ್ ಗಳಲ್ಲಿಯೂ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಮಾತನಾಡಬೇಕು ಎಂದು ತಹಶೀಲ್ದಾರ್ ರವರು ಆದೇಶ ನೀಡುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ ನೀಡಿದರು.

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ
ಕನ್ನಡ ರಾಜ್ಯೋತ್ಸವ ಆಚರಣೆ

ತಾಂಡವಪುರ ನವಂಬರ್ 2 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು, ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ತಾಯಿ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜಿಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು

ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬಿ ಶಿವಣ್ಣನವರು ನಮ್ಮ ಕನ್ನಡ ನಾಡು ಹಲವಾರು ರಾಷ್ಟ್ರ ಕವಿಗಳು ಹಲವಾರು ಸಾಹಿತಿಗಳು ಕನ್ನಡ ಪಂಡಿತರು ಇನ್ನು ಹಲವಾರು ಕನ್ನಡ ಭಾಷೆ ಬಗ್ಗೆ ಕಥೆ ಸಾಹಿತ್ಯ ರಚಿಸಿರುವಂತಹ ನಮ್ಮ ಈ ಕನ್ನಡ ನಾಡಲ್ಲಿ ನಾವು ಹುಟ್ಟಿರೋದು ನಮ್ಮ ಪುಣ್ಯ ತಾಯಿ ಕನ್ನಡ ಮಾತೆಯನ್ನು ನಾವು ಪಂಚಾಯತಿಯಲ್ಲಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ತಾಯಿ ಕನ್ನಡಾಂಬೆಗೆ ಗೌರವ ಸಲ್ಲಿಸಿ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಪ್ರಕಾಶ್ ಕಾರ್ಯದರ್ಶಿ ಕೆ ಕೆ ಮಾರಯ್ಯ ಲೆಕ್ಕ ಸಹಾಯಕ ಪುಟ್ಟರಾಜು ಹಾಗೂ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದು ಗೌರವ ಸಲ್ಲಿಸಿದರು