ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ
ವಿಜಯ ದರ್ಪಣ ನ್ಯೂಸ್…
ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.5:
ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೆ ಸಮೀಪ ಇರುವ ಸಣ್ಣ ಕೆರೆಯಲ್ಲಿ ಪುರಸಭೆ ವತಿಯಿಂದ ನೂತನವಾಗಿ ಪ್ರಾರಂಭಿಸಿರುವ ದೋಣಿ ವಿಹಾರಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.
ಸ್ವತಃ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಸಚಿವರು ಸಂತಸ ವ್ಯಕ್ತಪಡಿಸಿದರು. ನಂತರ ಮಾತನಾಡಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಬೋಟಿಂಗ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ದೋಣಿ ವಿಹಾರಿಗಳಿಗೆ ಲೈಫ್ ಜಾಕೆಟ್ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಬೋಟಿಂಗ್ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ , ಕೆ.ಸಿ ಮಂಜುನಾಥ್, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 06 :
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26 ನೇ ಸಾಲಿನ 13 ಫಲಾನುಭವಿ ಆಧಾರಿತ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ,ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆ,ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆಲ್ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಹ ವಿಕಲಚೇತನರು ಆನ್ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಕರ್ನಾಟಕ ಓನ್, ಬೆಂಗಳೂರು ಓನ್ ಹಾಗೂ ನೇರವಾಗಿಯು ಸಹ ವಿಕಲಚೇತನ ವ್ಯಕ್ತಿಗಳು https://sevasindhu.karnataka.gov.in/Sevasindhu/DepartmentServices ಜಾಲತಾಣದಲ್ಲಿ ನವೆಂಬರ್ 15 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ನಂ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:-08029787441 ಗೆ ಅಥವಾ ಹತ್ತಿರದ ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ/ ಪುರಸಭೆ/ನಗರಸಭೆ/ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
