--Ads--

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

On: December 9, 2025 1:39 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಡಿ.08:

ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 269 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆ ಮಕ್ಕಳಿಗೆ ಸೂಕ್ತ ಆಹಾರ, ಆರೋಗ್ಯ ಸೇವೆ ನೀಡಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸಬೇಕು. ಯಾವುದೇ ಕಾರಣಕ್ಕೂ ವ್ಯರ್ಥ ಮಾಡದಂತೆ ನೋಡಿಕೊಳ್ಳಬೇಕು ಎಂದು ಸಿಡಿಪಿಒಗಳಿಗೆ ಸೂಚಿಸಿದರು.

ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ, ಜೊತೆಗೆ ಅಂಗನವಾಡಿ ಇಂದ ಸಿಗುವ ಆಹಾರ ಸಾಮಗ್ರಿ ತಪ್ಪದೇ ತಲುಪಿಸಿ. ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು.

ಜಿಲ್ಲೆಯಲ್ಲಿ ಒಟ್ಟು 1277 ಅಂಗನವಾಡಿ ಕೇಂದ್ರಗಳಿದ್ದು, 999 ಸ್ವಂತ ಅಂಗನವಾಡಿ ಕಟ್ಟಡಗಳು, 3 ಪಂಚಾಯಿತಿ ಕಟ್ಟಡಗಳು, ಸಮುದಾಯ ಭವನದಲ್ಲಿನ 53 ಅಂಗನವಾಡಿಗಳು, 83 ಅಂಗನವಾಡಿಗಳು ಶಾಲೆಗಳಲ್ಲಿ ಹಾಗೂ 139 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಬಾಕಿ ಉಳಿದಿರುವ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು.

ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ 2025-26 ಸಾಲಿನ ಜುಲೈ 2025ರ ಮಾಹೆಯಿಂದ ನವೆಂಬರ್ 2025 ರವೆಗೆ ದಾಖಲಾದ 32 ಪ್ರಕರಣಗಳಲ್ಲಿ 8 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಶೈಲ್ ಭೀಮಸೇನ ಭಾಗಡಿ ಅವರು ಮಾತನಾಡಿ, ಸಾಂತ್ವನ ಕೇಂದ್ರಗಳಲ್ಲಿ ಬಗೆಹರಿಸಲಾಗದ ಪ್ರಕರಣಗಳನ್ನು ಸಿಡಿಪಿಒಗಳು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡಬೇಕು, ಇಲ್ಲವಾದಲ್ಲಿ, ಅಂತಹ ಪ್ರಕರಣಗಳನ್ನು ಬಗೆಹರಿಸಲು 15100 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ ಎಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now