ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್….

ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ.12:

ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ 6.45 ಕೋಟಿ ರೂ. ಅಂದಾಜು ಮೊತ್ತದಲ್ಲಿ ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ನಿರ್ಮಿಸಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ(ಬಯಪ)ದ ನೂತನ ಕಛೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಡಿಸೆಂಬರ್ 13 ಶನಿವಾರ ಬೆಳಿಗ್ಗೆ 11-00 ಗಂಟೆಗೆ , ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ, ಕುಂದಾಣ ಗ್ರಾಮ ಪಂಚಾಯಿತಿ ಕಾರ್ಯಾಲಯ ಇವರ ವತಿಯಿಂದ ನಿರ್ಮಿಸಲಾಗಿರುವ ಕುಂದಾಣ ಗ್ರಾಮ ಪಂಚಾಯಿತಿಯ ನೂತನ ಗ್ರಾಮ ಪಂಚಾಯಿತಿ ಕಟ್ಟಡ, ಕುಂದಾಣ ಹಾಗೂ ವೆಂಕಟಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ದೇವಗಾನಹಳ್ಳಿ ಗ್ರಾಮದಲ್ಲಿ ಶಾಲಾ ಕೊಠಡಿ ಉದ್ಘಾಟನೆ ಕಾರ್ಯಕ್ರಮವು ಮಧ್ಯಾಹ್ನ 01 ಗಂಟೆಗೆ ಕುಂದಾಣ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆರವೇರಿಸಲಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ,ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಘನ ಉಪಸ್ಥಿತಿ ಇರಲಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕ ಎಸ್.ರವಿ, ಪುಟ್ಟಣ್ಣ, ಎನ್ ನಾಗರಾಜ್ (ಎಂ.ಟಿ.ಬಿ), ರಾಮೋಜಿಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ ಶಾಂತಕುಮಾರ್, ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆಯ ತುಷಾರ್ ಗಿರಿನಾಥ್, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಲೋಕೋಪಯೋಗಿ ಇಲಾಖೆಯ ಆದಿತ್ಯ ಆಮ್ಲ ವಿಶ್ವಾಸ್, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಆಯುಕ್ತರು ರಾಜೇಂದ್ರ ಪಿ. ಚೋಳನ್. ಲೋಕೋಪಯೋಗಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಸತ್ಯನಾರಾಯಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ ಬಾಬಾ, ನಗರ ಮತು ಗ್ರಾಮಾಂತರ ಯೋಜನಾ ನಿರ್ದೇಶಕಿ ಜೆ. ಸುಮಾ ಅವರು ಉಪಸ್ಥಿತರಿರವರು.

#############################№######

ರಾಗಿ ಖರೀದಿ ನೋಂದಣಿಗೆ ಡಿ.15 ಕೊನೆ ದಿನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 12 :

ಜಿಲ್ಲೆಯಲ್ಲಿ 2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಇನ್ನೂ ನೋಂದಣಿ ಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ರಾಗಿ ಖರೀದಿ ಕೇಂದ್ರಗಳಿದ್ದು,
ನೆಲಮಂಗಲ ತಾಲ್ಲೂಕು:
1) ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು ಕೆಂಪಲಿಂಗನಹಳ್ಳಿ ಕ್ರಾಸ್ ಕುಣಿಗಲ್ ರಸ್ತೆ.
2) ವಿ.ಎಸ್.ಎಸ್.ಎನ್ ಕಳಲುಘಟ್ಟ ರೈತ ಕೇಂದ್ರ, ತ್ಯಾಮಗೊಂಡ್ಲು ಹೋಬಳಿ.
3) ವಿ.ಎಸ್.ಎಸ್.ಎನ್ ರೈತ ಕೇಂದ್ರ ಸೋಂಪುರ ಹೋಬಳಿ.

ದೊಡ್ಡಬಳ್ಳಾಪುರ ತಾಲ್ಲೂಕು:
1) ರೈತ ಭವನ ಕೇಂದ್ರ, ಎ.ಪಿ.ಎಂ.ಸಿ ಯಾರ್ಡ್.
2) ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.

ದೇವನಹಳ್ಳಿ ತಾಲ್ಲೂಕು: ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ಕುರುಬರ ದೊಡ್ಡಿ ರಸ್ತೆ.

ಹೊಸಕೋಟೆ ತಾಲ್ಲೂಕು: ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 15 ರೊಳಗೆ ನೋಂದಾಯಿಸಿಕೊಳ್ಳಿ.

ಈಗಾಗಲೇ ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ನೋಂದಣಿಯನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.