--Ads--

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ

On: December 23, 2025 4:58 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ

ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  . ಡಿಸೆಂಬರ್ .23:

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು ಆಗ ಮಾತ್ರ ನಿಮ್ಮ ಹಕ್ಕನ್ನು ನೀವು ಕೇಳಿ ಪಡೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ದೇವನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು

ವಿದ್ಯಾರ್ಥಿ ಜೀವನ ಕುತೂಹಲ ಮತ್ತು ಆಸಕ್ತಿದಾಯಕವಾಗಿರುತ್ತದೆ.ಪ್ರತಿಯೊಂದು ಮಕ್ಕಳಿಗೂ 18 ವರ್ಷ ಆಗುವ ತನಕ ಆರೋಗ್ಯ, ಶಿಕ್ಷಣ, ರಕ್ಷಣೆ ಸಿಗಬೇಕು. ವಿದ್ಯಾರ್ಥಿ ದೆಸೆಯಿಂದಲೆ ಸಮಾಜದ ಕುರಿತು ಚಿಂತನೆ, ಕಾಳಜಿ ವಹಿಸಬೇಕು. ಇದರಿಂದ ನಮ್ಮ ಸಮಾಜ ಹಾಗೂ ದೇಶದ ಅಭಿವೃದ್ಧಿ ಉಂಟಾಗುತ್ತದೆ ಎಂದು ತಿಳಿಸಿದರು.

ನಿಮಗೆ ಯಾವುದೇ ಸಮಸ್ಯೆ ಅಥವಾ ತೊಂದರೆಯಾದಾಗ ಕೂಡಲೇ ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಸಿಗದೆ ಇದೀಗ ಯಾವುದೇ ಭಯ ಪಡದೇ ನಮ್ಮ ಆಯೋಗದ ಸಹಾಯವಾಣಿಗೆ ಕರೆ ಮಾಡಿ ಎಂದರು.

ಮಕ್ಕಳು ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು.ದೂರದ ಊರಿನಿಂದ ಶಾಲೆಗೆ ಬರುವ ಮಕ್ಕಳು ಶಾಲೆಗೆ ತಡವಾಗುತ್ತದೆ ಎಂದು ಬೆಳಗಿನ ಸಮಯ ಉಪಹಾರ ಸೇವಿಸದೆ ಶಾಲೆಗೆ ಬರುತ್ತಿರುವ ವಿಷಯ ಹೆಚ್ಚಾಗಿ ಕೇಳಿ ಬಂದಿದೆ ಈ ಕುರಿತು ಆಯೋಗದೊಂದಿಗೆ ಮಾತನಾಡಿ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲು ತಿಳಿಸಲಾಗುವುದು ಮತ್ತು ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಮುಖ್ಯ ರಸ್ತೆಯಲ್ಲಿ ವಾಹನಗಳು ವೇಗವಾಗಿ ಚಲಿಸುವುದರಿಂದ ಮಕ್ಕಳಿಗೆ ರಸ್ತೆ ದಾಟಲು ಕಷ್ಟವಾಗುತ್ತದೆ ಹಾಗಾಗಿ ಶಾಲೆಗಳ ಹತ್ತಿರ ವಾಹನಗಳ ವೇಗ ಮಿತಿಯನ್ನು ಕಡಿಮೆ ಮಾಡಲು ಹಾಗೂ ರಸ್ತೆಯಲ್ಲಿ ಹಂಪ್ಸ್ ಮತ್ತು ನಾಮಫಲಕಗಳನ್ನು ಹಾಕಿಸಲು ಸೂಚಿಸಲಾಗಿದೆ.

ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು ಜೊತೆಗೆ ಲ್ಯಾಬ್ ಮತ್ತು ಗ್ರಂಥಾಲಯ ವ್ಯವಸ್ಥೆ ಇರಬೇಕು ಪ್ರತಿ ದಿನ ಪತ್ರಿಕೆ ಹಾಕಿಸಬೇಕು. ಬಿರುಕು ಬಿಟ್ಟ ಅಥವಾ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ವಿಧ್ಯಾರ್ಥಿಗಳಿಗೆ ತರಗತಿ ನಡೆಸಬಾರದು ಹಾಸ್ಟೆಲ್ ವಾರ್ಡನ್ ಮತ್ತು ಶಿಕ್ಷಕರು ಮಕ್ಕಳಿಗೆ ಕಿರುಕುಳ ನೀಡಬಾರದು ಆ ರೀತಿ ನಡೆದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ದೇವನಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕವಿತಾ, ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕ ನಂಜಪ್ಪ, ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ದುರ್ಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now