ಬಿಜೆಪಿ ಸರ್ಕಾರದಲ್ಲಿ ನೇಮಕವಾಗಿದ್ದ ಎಲ್ಲಾ ನಾಮನಿರ್ದೇಶನಗಳು ರದ್ದು: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳ ಮತ್ತು ಇತರೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು, ನಿರ್ದೇಶಕರಗಳ, ಸದಸ್ಯರುಗಳ ನಾಮನಿರ್ದೇಶನಗಳನ್ನು ದಿನಾಂಕ: 22/05/2023 ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ