ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ

ವಿಜಯ ದರ್ಪಣ ನ್ಯೂಸ್….

ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ

ಶಿಡ್ಲಘಟ್ಟ : ವೈಕುಂಠ ಏಕಾದಶಿ ಪ್ರಯುಕ್ತ ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು.

ದೇವಸ್ಥಾನಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ನಂಬಿಕೆಯಿಂದ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ನಗರದ ಕೆ.ಎಚ್.ಬಿ ಕಾಲೋನಿಯ ಶ್ರೀಕಲ್ಯಾಣ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ವೆಂಕಟರಮಣಸ್ವಾಮಿಯ ಉತ್ಸವ ಮೂರ್ತಿಯನ್ನು ಉಯ್ಯಾಲೆಯಲ್ಲಿರಿಸಿದ್ದು, ಭಕ್ತರು ದೇವರ ಅಡಿಯಲ್ಲಿ ಹಾದು ಬರಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ತಂಡೋಪತಂಡವಾಗಿ ಆಗಮಿಸಿದ ಭಕ್ತಾಧಿಗಳು ದೇವರ ದರ್ಶನ ಪಡೆದು,ತೀರ್ಥ, ಪ್ರಸಾದವನ್ನು ಸ್ವೀಕರಿಸಿದರು.
ಮದ್ಯಾಹ್ನದವರೆಗೂ ವೈಕುಂಠದ ಬಾಗಿಲ ಮೂಲಕ ದೇವರ ದರ್ಶನ ಪಡೆದರು.

ವೈಕುಂಠ ಏಕಾದಶಿಯ ಪ್ರಯುಕ್ತ ಸ್ವಾಮಿಯವರಿಗೆ ಸುಪ್ರಭಾತ ಸೇವೆ, ಅಭಿಷೇಕ, ವಜ್ರಾಕೋಷ ಅಲಂಕಾರ ಹಾಗೂ ವೈಕುಂಠ ದ್ವಾರ ದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ವೈಕುಂಠ ಏಕಾದಶಿಯ ದಿನ ತಮ್ಮ ಪೂರ್ವಜರಿಗೆ, ಮಾತಾ ಪಿತೃಗಳಿಗೆ ಸದ್ಗತಿ ಮತ್ತು ವೈಕುಂಠ ಪ್ರಾಪ್ತಿಯಾಗಲಿ ಎಂದು ಹೇಳಿ ವೈಕುಂಠ ದ್ವಾರ ಪ್ರವೇಶವನ್ನು ಮಾಡಿದರೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಭಕ್ತರದ್ದು.

ಇದೇ ವೇಳೆ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು, ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ತೀರ್ಥ ಪ್ರಸಾದಗಳನ್ನು ವಿನಿಯೋಗ ಮಾಡಲಾಯಿತು.

ತಾಲ್ಲೂಕಿನ ಉತ್ತರ ಪಿನಾಕಿನ ನದಿ ತಟದ ತಲಕಾಯಲ ಬೆಟ್ಟದಲ್ಲಿ ನೆಲೆಸಿರುವ ಶ್ರೀಭೂನೀಳಾ ಸಮೇತ ವೆಂಕಟರಮಣಸ್ವಾಮಿ, ನಗರದ ಕೆ.ಎಚ್.ಬಿ.ಕಾಲೋನಿಯ ಶ್ರೀ ವೆಂಕಟರಮಣಸ್ವಾಮಿ ದೇವಾಲಯ,ಮೇಲೂರಿನ ಶ್ರೀದೇವಿ ಭೂದೇವಿ ಶ್ರೀ ಸೌಮ್ಯ ಚನ್ನಕೇಶವಸ್ವಾಮಿ ಮತ್ತು ಶ್ರೀತಿರುಮಲಸ್ವಾಮಿ ದೇವಾಲಯ, ಬೆಳ್ಳೂಟಿ ಗೇಟ್‌ನ ಶ್ರೀಲಕ್ಷ್ಮಿವೆಂಕಟೇಶ್ವರಸ್ವಾಮಿ, ಚಿಕ್ಕದಾಸರಹಳ್ಳಿಯ ಗುಟ್ಟದ ಮೇಲಿನ ಶ್ರೀಭೂನೀಳಾ ಸಮೇತ ಶ್ರೀಬ್ಯಾಟರಾಯಸ್ವಾಮಿ ದೇವಾಲಯ, ದೇವರಮಳ್ಳೂರಿನ ಶ್ರೀ ಆತ್ಮಾರಾಮ ದೇವಾಲಯ, ಪಟ್ರೇನಹಳ್ಳಿಯ ಶ್ರೀ ಸಾಯಿ ಮಂದಿರ ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವೈಕುಂಠ ಏಕಾದಶಿಯನ್ನು ಆಚರಿಸಲಾಯಿತು.

ಸರ್ಕಾರ ನೀಡುವ ಸೌಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು

ಶಿಡ್ಲಘಟ್ಟ : ನೂತನವಾಗಿ ಉದ್ಯಮ ಆರಂಭಿಸುವವರಿಗೆ ಮತ್ತು ಈಗಾಗಲೇ ಉದ್ಯಮದಲ್ಲಿ ತೊಡಗಿರುವವರಿಗೆ ಸರ್ಕಾರವು ಬಂಡವಾಳ, ತಾಂತ್ರಿಕ ನೆರವು ಹಾಗೂ ತರಬೇತಿ ರೂಪದಲ್ಲಿ ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಲಿಂಗಯ್ಯ ತಿಳಿಸಿದರು.

ನಗರದ ಶ್ರೀರಾಮ ಪ್ಯಾಲೇಸ್‌ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ವಿ ಕೇರ್ ಸೊಸೈಟಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬ್ಯಾಂಪ್ (RAMP) ಯೋಜನೆಯಡಿ ‘ಎಂಎಸ್‌ಎಂಇ ಕ್ಲಸ್ಟ‌ರ್ ಟೆಕ್ನಾಲಜಿ’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ರೇಷ್ಮೆ ನೂಲು ಬಿಚ್ಚಾಣಿಕೆಯ ವಿವಿಧ ಹಂತಗಳಲ್ಲಿ
ಆಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಾಗಬೇಕು ಕಡಿಮೆ ಖರ್ಚು ಮತ್ತು ಕಡಿಮೆ ಬಂಡವಾಳದಲ್ಲಿ ಹೆಚ್ಚು ಉತ್ಪಾದನೆ ಹಾಗೂ ಲಾಭ ಪಡೆಯುವತ್ತ ಉದ್ಯಮಿಗಳು ಚಿಂತನೆ ನಡೆಸಬೇಕು ಎಂದು ಹೇಳಿದರು.

ವಿದೇಶಿ ಮಾರುಕಟ್ಟೆ ಮಾದರಿ ಅಳವಡಿಸಿಕೊಳ್ಳಿ : ವಿ ಕೇ‌ರ್ ಸೊಸೈಟಿಯ ಸಂಸ್ಥಾಪಕಿ ಅನಿತಾರಾವ್ ಮಾತನಾಡಿ, ನಮ್ಮಲ್ಲಿ ತಯಾರಾಗುವ ರೇಷ್ಮೆ ನೂಲನ್ನು ಬಳಸಿ ವಿದೇಶಗಳಲ್ಲಿ ಅತ್ಯುನ್ನತ ಗುಣಮಟ್ಟದ ಗೃಹಬಳಕೆಯ ಉತ್ಪನ್ನಗಳನ್ನು ತಯಾರಿಸಿ ಮೌಲ್ಯವರ್ಧನೆ ಮಾಡಲಾಗುತ್ತದೆ ಅಂತಹ ಆಲೋಚನೆ ಮತ್ತು ಮಾರುಕಟ್ಟೆ ತಂತ್ರಗಳನ್ನು ನಮ್ಮ ಉದ್ಯಮಿಗಳು ಅಳವಡಿಸಿಕೊಂಡರೆ ರೇಷ್ಮೆ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ಬೆಲೆ ಸಿಗಲು ಸಾಧ್ಯ ಎಂದರು.

ಸಂವಾದದಲ್ಲಿ ಎಂಎಸ್‌ಎಂಇ ಕ್ಷೇತ್ರಕ್ಕೆ ಸಂಬಂಧಿಸಿದ ಸರ್ಕಾರದ ಸಬ್ಸಿಡಿಗಳು, ಸಾಲ ಸೌಲಭ್ಯ, ಮಾರುಕಟ್ಟೆ ಸಂಪರ್ಕ ಮತ್ತು ಕಾನೂನು ಸಮಸ್ಯೆಗಳಿಗೆ ಪರಿಹಾರಗಳ ಕುರಿತು ತಜ್ಞರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿ ಮಹೇಶ್, ರೇಷ್ಮೆ ಮಾರುಕಟ್ಟೆ ಉಪನಿರ್ದೇಶಕ ಎನ್.ಉಮೇಶ್, ರೇಷ್ಮೆ ಬಿಚ್ಚಾಣಿಕೆದಾರರ ಸಂಘದ ಅಧ್ಯಕ್ಷ ಅನ್ಸರ್‌ಖಾನ್ ,ಅನಿಲ್ ಕುಮಾರ್,ಶ್ರೀನಿವಾಸ್, ನಾಗನರಸಿಂಹ,ಸೇರಿದಂತೆ ರೇಷ್ಮೆ ಉದ್ಯಮದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು