ಜಿಲ್ಲಾಡಳಿತ ಭವನದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್….
ಜಿಲ್ಲಾಡಳಿತ ಭವನದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ.01 :
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಉದ್ಘಾಟಿಸಿ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಿಲ್ಲಿಸಿದರು.
ನಂತರ ಮಾತನಾಡಿ ವಾಸ್ತು ಶಿಲ್ಪದ ಹರಿಕಾರ ಎಂದೇ ಪ್ರಸಿದ್ಧಿ ಪಡೆದಿರುವ ವಿಶ್ವಕರ್ಮ ಜಕಣಾಚಾರಿ ಅವರು ವಾಸ್ತು ಶಿಲ್ಪ ಮತ್ತು ವಿಗ್ರಹ ಕೆತ್ತನೆಯಲ್ಲಿ ಚಿರಪರಿಚಿತರಾಗಿ ಅವರ ಕೆತ್ತನೆಗಳಲ್ಲಿ ಪ್ರಮುಖವಾಗಿ ಬೇಲೂರು ಚನ್ನಕೇಶವ, ಹಳೇಬೀಡು ಸೋಮನಾಥೇಶ್ವರ ದೇವಾಲಾಯಗಳ ವಾಸ್ತು ಶಿಲ್ಪ ಕಲೆಯು ವಿಶ್ವ ಪಾರಂಪರಿಕ ತಾಣಗಳ ಮಾನ್ಯತೆ ಪಡೆದಿದೆ. ಅವರ ಕಲೆಗೆ ಬೆಲೆ ಕಟ್ಟಲಾಗದು. ಅವರ ಕಾಯಕ ನಿಷ್ಠೆ, ಆದರ್ಶ ಗುಣ ಮತ್ತು ಬೆಳೆದು ಬಂದ ಪರಿಶ್ರಮದ ಘಟನೆಗಳನ್ನು ನಾವು ಅರಿಯಬೇಕು, ವಾಸ್ತು ಶಿಲ್ಪಕಲೆಗೆ ಅವರ ಕೊಡುಗೆ ಅಸಾಮಾನ್ಯ ವಾದುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
&&&&&&&&&&&&&&&&&&&&&&&&&&&
ಇ-ಸ್ವತ್ತು ಮಾಹಿತಿಗೆ ಸಹಾಯವಾಣಿ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಜ.01:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದಂತೆ, ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು 2.0 ತಂತ್ರಾಂಶ ಕುರಿತು ಸಾರ್ವಜನಿಕರಿಗೆ ಯಾವುದೇ ತಾಂತ್ರಿಕ ಸಮಸ್ಯೆಗಳು ಹಾಗೂ ತಂತ್ರಾಂಶದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಹಾಯವಾಣಿ ತೆರೆಯಲಾಗಿದ್ದು ಮೊ.ಸಂ 7483253836, 6363288040 ನಂಬರ್ ಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
