ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ
ವಿಜಯ ದರ್ಪಣ ನ್ಯೂಸ್…
ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ

ಶಿಡ್ಲಘಟ್ಟ : ಚಿಮುಲ್ ಚುನಾವಣೆ ಸ್ಪರ್ಧೆಗೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲದೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು, ಪಕ್ಷದ ವರಿಷ್ಠರಾದ ದೇವೇಗೌಡತು ಮತ್ತು ಕುಮಾರಸ್ವಾಮಿ ಅವರ ಸೂಚನೆಯಂತೆ ಮೈತ್ರಿ ಮುಂದುವರೆಯಲಿದೆ ಬುಧವಾರ ನಮ್ಮೆಲ್ಲಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ಮೇಲೂರು ಗೃಹಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಮತ್ತು ಡೇರಿಗಳ ಡೆಲಿಗೇಟ್ಸ್ ಗಳ ಸಭೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸದ ನಂತರ
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಚುನಾವಣೆಗೆ ಶಿಡ್ಲಘಟ್ಟ ತಾಲ್ಲೂಕಿನಿಂದ ಇಬ್ಬರು ನಿರ್ದೇಶಕರನ್ನು ಆಯ್ಕೆ ಮಾಡಬೇಕಿದ್ದು ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿಯು ಸಜ್ಜಾಗಿದ್ದು ನಿರ್ದೇಶಕರ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದರು.
ಫೆಬ್ರವರಿ ೧ರಂದು ಚುನಾವಣೆ ನಡೆಯಲಿದ್ದು, ಜನವರಿ 19 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಶಿಡ್ಲಘಟ್ಟದಿಂದ ಇಬ್ಬರು ನಿರ್ದೇಶಕರನ್ನು ಆಯ್ಕೆ ಮಾಡಿ ಕಳುಹಿಸಬೇಕಿದೆ
ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿಯಿಂದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದರು.

ಶಿಡ್ಲಘಟ್ಟ ಕ್ಷೇತ್ರಕ್ಕೆ ಬಂಕ್ ಮುನಿಯಪ್ಪ ಮತ್ತು ಜಂಗಮಕೋಟೆ ಕ್ಷೇತ್ರಕ್ಕೆ ಹುಜಗೂರು ರಾಮಯ್ಯ ಅವರನ್ನು ಅಭ್ಯರ್ಥಿಗಳಾಗಿ ಅಂತಿಮಗೊಳಿಸಲಾಗಿದೆ ಎಂದರು.
ಇನ್ನು ಬಾಗೇಪಲ್ಲಿ ಕ್ಷೇತ್ರಕ್ಕೆ ಈ ತಿಮ್ಮಸಂದ್ರದ ಶಿವಾರೆಡ್ಡಿ ಅವರ ತಮ್ಮ ವೆಂಕಟರಣರೆಡ್ಡಿ ಅವರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಗುವುದು, ಚೇಳೂರು ಕ್ಷೇತ್ರಕ್ಕೆ ಇಬ್ಬರು ಆಕಾಂಕ್ಷಿಗಳಿದ್ದು ಬುಧವಾರದೊಳಿಗೆ ಮಾತುಕತೆ ಮೂಲಕ ಒಬ್ಬರನ್ನು ಅಂತಿಮಗೊಳಿಸಲಾಗುವುದು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಂಕ್ ಮುನಿಯಪ್ಪ ,ಚಿಲಕನೇರ್ಪು ಕೃಷ್ಣಾರೆಡ್ಡಿ ಹಾಜರಿದ್ದರು.
