ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್…
ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 21:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮೀ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಗ್ರಾಮ ಪಂಚಾಯಿತಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ. 19 :
2024-25ನೇ ಸಾಲಿನ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ (ಬಾಲ್ಯವಿವಾಹ ಮುಕ್ತ ಗ್ರಾಪಂ) ರೂ 25,000/- ನಗದು ಪ್ರಶಸ್ತಿ ನೀಡಲಾಗುತ್ತಿದ್ದು, ಇದಕ್ಕಾಗಿ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಜಿಲ್ಲೆಯಿಂದ ಒಂದು ಗ್ರಾಮ ಪಂಚಾಯತಿ ಆಯ್ಕೆ ಮಾಡಲು ಆಯ್ಕೆ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 30ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆ “ಜಿಲ್ಲಾಡಳಿತ ಭವನ”, ಸಂ.206, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ -080-29560034 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿಯ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ದೊಡ್ಡಬಳ್ಳಾಪುರದ ಆಶಾ ಅರ್ ಆಯ್ಕೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .19:
ನವದೆಹಲಿಯಲ್ಲಿ ನಡೆಯಲಿರುವ 2026ನೇ ಸಾಲಿನ ಗಣರಾಜ್ಯೋತ್ಸವ ಕರ್ತವ್ಯ ಪಥ(ಪರೇಡ್)ದ ವೀಕ್ಷಣೆಗೆ ಸ್ವಸಹಾಯ ಗುಂಪುಗಳ ಸದಸ್ಯರನ್ನು ವಿಶೇಷ ಅತಿಥಿಗಳಾಗಿ ನಿಯೋಜನೆ ಮಾಡುವ ಸಂಬಂಧ ಜಿಲ್ಲೆಯಿಂದ ದೊಡ್ಡಬಳ್ಳಾಪುರದಆರೂಡಿ ಗ್ರಾಮಪಂಚಾಯಿತಿಯ ಗರಿಕೇಹಳ್ಳಿ ಗ್ರಾಮದ ಸ್ವಸಹಾಯ ಗುಂಪಿನ ಸದಸ್ಯರಾದ ಆಶಾ ಆರ್ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
