ಶ್ರಮಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ : ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಗೌಡ
ವಿಜಯ ದರ್ಪಣ ನ್ಯೂಸ್….
ಶ್ರಮಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ : ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಗೌಡ

ಶಿಡ್ಲಘಟ್ಟ : ಶ್ರಮಿಕರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ, ಅವರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಜಿ.ಅಮೃತಾ ಗೌಡ ತಿಳಿಸಿದರು.
ನಗರದ ಶ್ರೀವಾಸವಿ ಕಲ್ಯಾಣ ಮಂಟಪದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಸಂಘಟಿತ ಕಾರ್ಮಿಕರ ನೋಂದಣಿ, ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ಹಿರಿಯ ಕಾರ್ಮಿಕರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಸಂಘಟಿತ ಕಾರ್ಮಿಕರ ಬದುಕಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಹಾಗು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಮುಂದೆ ಬರಬೇಕೆಂದು ಹೇಳಿದರು.
ಬೀದಿ ಬದಿ ವ್ಯಾಪಾರಿಗಳು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸೇವೆಯನ್ನು ಗುರುತಿಸಿ ಅವರಿಗೆ ಜೀವ ವಿಮೆ ಹಾಗೂ ಆರೋಗ್ಯ ಭದ್ರತೆ ಒದಗಿಸಲು ನಗರಸಭೆ ಸದಾ ಬದ್ಧವಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಕಾರ್ಮಿಕರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳು ವಿಳಂಬವಿಲ್ಲದೆ ಸಮರ್ಪಕವಾಗಿ ತಲುಪಬೇಕು ಅವರ ಜೀವಕ್ಕೆ ಭದ್ರತೆ ನೀಡುವ ವಿಮಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಅಭಿನಂದನೀಯ ಹಾಗು ವಿವೇಕಾನಂದರ ಜಯಂತಿಯ ಸಂದರ್ಭದಲ್ಲಿ ಶ್ರಮಿಕರನ್ನು ಗೌರವಿಸುತ್ತಿರುವುದು ಅರ್ಥಪೂರ್ಣವಾದದ್ದು ಎಂದರು.
ಈ ವೇಳೆ ನೂರಾರು ಕಾರ್ಮಿಕರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ಗಳನ್ನು ನೋಂದಾಯಿಸಿ ವಿತರಿಸಲಾಯಿತು,ವಿವಿಧ ಕ್ಷೇತ್ರಗಳಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಕಾರ್ಮಿಕರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಶಭಾಸಾ, ತಾಲ್ಲೂಕು ಕಾರ್ಮಿಕ ಇಲಾಖೆ ಅಧಿಕಾರಿ ವಿಜಯಲಕ್ಷ್ಮೀ, ಮುಖಂಡರಾದ ,ನಾರಾಯಣಸ್ವಾಮಿ,
ಡಾ.ಡಿ.ಟಿ.ಸತ್ಯನಾರಾಯಣರಾವ್, ಮನೋಹರ್, ಅನಿಲ್ ಕುಮಾರ್,ನರೇಶ್,ಅಮಾನುಲ್ಲಾ ,ಮಂಜುಳಾ ,ಎಸ್.ಪ್ರಕಾಶ್ ಮುಂತಾದವರು ಹಾಜರಿದ್ದರು.
