ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು.

ವಿಜಯ ದರ್ಪಣ ನ್ಯೂಸ್…,

ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು

ಶಿಡ್ಲಘಟ್ಟ : ಫ್ಲೆಕ್ಸ್ ತೆರವು ವಿಚಾರದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದಿಂದ ಅಮಾನತುಗೊಳಿಸಿದೆ,ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಈ ಸಂಬಂಧ ಅಮಾನತು ಆದೇಶವನ್ನು ಹೊರಡಿಸಿದೆ.

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ, ರಾಜೀವ್ ಗೌಡ ಅವರು ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ,ಈ ಬೆಳವಣಿಗೆ ಸ್ಥಳೀಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಹಿಂದೆ, ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಫ್ಲೆಕ್ಸ್ ಅನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದರು.

ಈ ಘಟನೆಗೆ ಸಂಬಂಧಿಸಿ ಪೌರಾಯುಕ್ತೆಗೆ ಧಮ್ಕಿ ಹಾಕಿದ ಆರೋಪ ರಾಜೀವ್ ಗೌಡ ಅವರ ವಿರುದ್ಧ ಕೇಳಿಬಂದಿತ್ತು
ಘಟನೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರು ರಾಜೀವ್ ಗೌಡ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರು.

ಏಳು ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿತ್ತು , ನಿಗದಿತ ಅವಧಿಯಲ್ಲಿ ಸಮರ್ಪಕ ಉತ್ತರ ನೀಡದ ಕಾರಣ, ಶಿಸ್ತು ಕ್ರಮವಾಗಿ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.