ನಮ್ಮ ಸಂವಿಧಾನ ರಾಷ್ಟ್ರದ ಭದ್ರ ಬುನಾದಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…..

ಜಿಲ್ಲಾಡಳಿತ ಭವನದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ನಮ್ಮ ಸಂವಿಧಾನ ರಾಷ್ಟ್ರದ ಭದ್ರ ಬುನಾದಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ.26 :

ಭಾರತೀಯ ಸಂವಿಧಾನವು ಸುಭದ್ರ ಹಾಗೂ ಸಶಕ್ತ ರಾಷ್ಟ್ರ ನಿರ್ಮಿಸುವಲ್ಲಿ ಭದ್ರ ಬುನಾದಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

“77ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿ ಮಾತನಾಡಿದರು.

ಅನ್ಯ ರಾಷ್ಟ್ರಗಳು ಮೆಚ್ಚುವಂತೆ ಭಾರತ ಸಂವಿಧಾನ ರಚಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು, ನಾವೆಲ್ಲರೂ ಜೀವನದಲ್ಲಿ ಸಂವಿಧಾನದ ಪೀಠಿಕೆಯ ಆಶಯ ಅರಿತು ಪಾಲನೆ ಮಾಡಬೇಕು. ನಮ್ಮ ಸಂವಿಧಾನ ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅವಕಾಶ ನಮಗೆ ಕೊಟ್ಟಿದೆ ಎಂದರು.

ಭಾರತ ಸಾಮಾಜಿಕ, ಆರ್ಥಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಸಾಕಷ್ಟು ಪ್ರಗತಿ ಕಂಡು ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯದ್ ಆಯಿಶಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹

ಜಿಲ್ಲಾಡಳಿತ ಭವನದಲ್ಲಿ ಸಂಗೊಳ್ಳಿ ರಾಯಣ್ಣನವರ 195ನೇ ಪುಣ್ಯಸ್ಮರಣೆ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜನವರಿ.26:

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಮನ ಸಲ್ಲಿಸುವ ಮೂಲಕ ರಾಷ್ಟ್ರಭಕ್ತ ಸಂಗೊಳ್ಳಿ ರಾಯಣ್ಣನವರ 195ನೇ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯದ್ ಆಯಿಶಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.