ವಿಜಯ ದರ್ಪಣ ನ್ಯೂಸ್….
ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸ್ನೇಹ ಬಾಂಧವ್ಯ ಬೆರೆಯುವ ಕ್ರೀಡಾ ಪಂದ್ಯಾವಳಿ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ: ಎಂ ದಕ್ಷಿಣ ಮೂರ್ತಿ

ತಾಂಡವಪುರ ಜನವರಿ 26 ಕ್ರಿಕೆಟ್ ಆಟವು ಮನುಷ್ಯನ ಆರೋಗ್ಯಕ್ಕೆ ಉತ್ತಮ ಬೆಳವಣಿಗೆ ಹಾಗೂ ಸ್ನೇಹ ಬಾಂಧವಕ್ಕೆ ಸಹಕಾರಿಯಾಗಲಿದೆ ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಸ್ನೇಹ ವಿಶ್ವಾಸವನ್ನು ಗಳಿಸಿಕೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎಂ ದಕ್ಷಿಣ ಮೂರ್ತಿ ರವರುಆಟಗಾರರಿಗೆ ಸಲಹೆ ನೀಡಿದರು.
ಅವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಗ್ರಾಮದೇವತೆ ಮಾರಮ್ಮನ ಜಾತ್ರೆ ಪ್ರಯುಕ್ತ ಏರ್ಪಡಿಸಿರುವ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡುತ್ತಾಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಮತ್ತು ದೇಹಕ್ಕೆ ಉತ್ತಆಟಗಳುಗ್ರಾಮೀಣ ಭಾಗದ ಯುವಕರು ಹೆಚ್ಚು ಹೆಚ್ಚು ಗ್ರಾಮೀಣ ಭಾಗದಲ್ಲಿ ಇಂತಹ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವ ಜೊತೆಗೆ ಅವರ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ಸ್ನೇಹ ಬಾಂಧವ್ಯವನ್ನು ಬೆಸೆಯುವ ಹಟವಾಗಿದ್ದು ಗ್ರಾಮೀಣ ಭಾಗದಲ್ಲಿ ಇನ್ನು ಹೆಚ್ಚು ಹೆಚ್ಚು ನಡೆಯುವಂತಾಗಲಿ ಇದಕ್ಕೆ ನಮ್ಮ ಕೈಲಾದ ಸಹಾಯವನ್ನು ಮಾಡುತ್ತೇವೆ ಎಂದು ಬರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎಂ ದಕ್ಷಿಣ ಮೂರ್ತಿ ಮುಖಂಡರಾದ ಸಿದ್ದರಾಮಯ್ಯನ ಹುಂಡಿ ಸಚಿನ್ ಪ್ರದೀಪ್ ಕುಮಾರ್ ತಾಂಡವಪುರದ ಮಹೇಶ್ ಧರ್ಮ ಹಾಗೂ ಪಂದ್ಯಾವಳಿ ಆಯೋಜಕರು ಕ್ರೀಡಾ ಅಭಿಮಾನಿಗಳು ಕ್ರೀಡಾಪಟುಗಳು ಈ ಸಂದರ್ಭದಲ್ಲಿ ಹಾಜರಿದ್ದರು







