--Ads--

ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ

On: February 2, 2026 3:18 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

 ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.02 :

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿ ಮಳೆಗಾಲ ಸಂದರ್ಭದಲ್ಲಿ ಜಿಲ್ಲಾಡಳಿತ ಭವನ ಸಂಕೀರ್ಣ ಕಟ್ಟಡದ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಣೆ ಮಾಡಿ ಪುನರ್ ಬಳಕೆ ಮಾಡುವ ಉದ್ದೇಶದಿಂದ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಲಾಗುತ್ತಿದೆ. ಇದರಿಂದ ಮಳೆ ನೀರು ಪೋಲಾಗದಂತೆ ತಡೆಯುವುದು ಜೊತೆಗೆ ಅಂತರ್ಜಲ ಮರುಪೂರಣ ಮಾಡಲು ಸಹಕಾರಿ ಆಗಲಿದೆ.

ಜಿಲ್ಲಾ ಅಂತರ್ಜಲ ಇಲಾಖೆ ವತಿಯಿಂದ ಖಾಸಗಿ ಕಂಪನಿ ಸಹಭಾಗಿತ್ವದಲ್ಲಿ ಅಂದಾಜು 10 ಲಕ್ಷ ವೆಚ್ಚದಲ್ಲಿ 30,000 ಲೀಟರ್ ನೀರು ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಲಾಗುವುದು, ಸಂಗ್ರಹವಾದ ಮಳೆ ನೀರನ್ನು ಪುನರ್ ಬಳಕೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ, ಜಿಲ್ಲಾ ಅಂತರ ಜಲ ಇಲಾಖೆಯ ಉಪನಿರ್ದೇಶಕಿ ಜಾನಕಿ ಪಿ, ಹಿರಿಯ ಭೂವಿಜ್ಞಾನಿ ಪಲ್ಲವಿ ಎನ್, ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now