ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ
ವಿಜಯ ದರ್ಪಣ ನ್ಯೂಸ್…
ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ

ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.09:
ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ.9 ರಿಂದ 13ರ ವರೆಗೆ ಜಿಲ್ಲೆಯಾ ಎಲ್ಲಾ ಬ್ಯಾಂಕ್ ಗಳಲ್ಲಿ ಐದು ದಿನಗಳ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಪ್ತಾಹದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
ಹಣಕಾಸು ಸೇವೆಗಳ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿರ್ದೇಶನದಂತೆ ಜಿಲ್ಲಾ ಮಾರ್ಗದರ್ಶಕ ಬ್ಯಾಂಕ್ ಮೂಲಕ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಾದ್ಯಂತ ಇರುವ 268 ಬ್ಯಾಂಕ್ ಶಾಖೆಗಳಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ಎನ್ನುವುದು ಈ ಆರ್ಥಿಕ ಸಪ್ತಾಹದ ವಿಷಯವಾಗಿದ್ದು, ಕೆವೈಸಿಯ ಪ್ರಾಮುಖ್ಯತೆ ಹಾಗೂ ಒವಿಡಿ ಅಂದರೆ ಅಧಿಕೃತವಾಗಿ ಮಾನ್ಯವಾದ ದಾಖಲೆಗಳ ಬಗೆಗಿನ ವಿಚಾರಗಳು, ರಿ-ಕೆವೈಸಿ, ವಿಡಿಯೋ ಕೆವೈಸಿ, ಸಿ-ಕೆವೈಸಿ, ಆಧಾರ್ ಓಟಿಪಿ ಆಧಾರಿತ ಇ- ಕೆವೈಸಿಗಳ ಬಗ್ಗೆ ಮಾಹಿತಿ ಕುರಿತಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳಲ್ಲಿ ಪ್ರತಿದಿನ ಒಂದೊಂದು ಕಾರ್ಯಕ್ರಮ ಏರ್ಪಡಿಸುವ ಮೂಲಕ ಅರಿವು ಮೂಡಿಸಲಾಗುವುದು. ಬ್ಯಾಂಕ್ ಖಾತೆ ದಾರರು, ಸಾರ್ವಜನಿಕರು ತಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಸಪ್ತಾಹದಲ್ಲಿ ಭಾಗವಹಿಸಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಮಾಂಜಿ, ಜೈ ಶೇಖರ್, ಇತರರು ಉಪಸ್ಥಿತರಿದ್ದರು.
