--Ads--

ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಚಾಲನೆ

On: February 11, 2026 4:21 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಚಾಲನೆ

ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂ . ಫೆ.12:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಪ್ರಯೋಜನಗಳ ಬಗ್ಗೆ ಪ್ರಚಾರ ವಾಹನವು ಸಂಚರಿಸಿ ಎಲ್‍ಇಡಿ ಪರದೆ ಪ್ರದರ್ಶನ ಹಾಗೂ ಕಲಾ ತಂಡಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಿದೆ.

ಜಿಲ್ಲೆಯಾದ್ಯಂತ ಗ್ರಾಮ, ಪಟ್ಟಣಗಳಲ್ಲಿ ಜಾಗೃತಿ ವಾಹನ ಸಂಚರಿಸಲಿದ್ದು ಪಂಚ ಗ್ಯಾರಂಟಿ ಯೋಜನೆಗಳು ತಲುಪದ ಅರ್ಹ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಲು, ಸಾರ್ವಜನಿಕರು ಯೋಜನೆಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಲು ನೆರವಾಗಲಿದೆ.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್ ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂ.ಗ್ರಾ.ಜಿಲ್ಲೆ, ಫೆ. 11:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕವನ್ನು 28-02-2026 ರವರೆಗೆ ವಿಸ್ತರಿಸಲಾಗಿದೆ.

ಈ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧಿಕ, ಸಿಖ್, ಪಾರ್ಸಿ) ಹಾಗೂ ಶೇ. 25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ
ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊಬೈಲ್ ಸಂಖ್ಯೆ- 9632249214/ 9538384846, ಪ್ರಾಂಶುಪಾಲರು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ- 8660971267/ 8317403213,
ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ, ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ ದೇವನಹಳ್ಳಿ ತಾ. ದೂರವಾಣಿ ಸಂಖ್ಯೆ-8861926851, 7676905779, 8310103980, 9845622337, 9986874875, 8904491033, ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿ ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ‌ಅಧಿಕಾರಿಗಳು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now